ಅಪಘಾತ

ಅಡಿಷನಲ್‌ ಎಸ್ಪಿ ವಾಹನಕ್ಕೆ ತಿಮರೋಡಿ ಬೆಂಬಲಿಗರ ಕಾರು ಢಿಕ್ಕಿ; ಮೂವರ ಬಂಧನ..!!

tv clinic

ಈ ಸುದ್ದಿಯನ್ನು ಶೇರ್ ಮಾಡಿ

ಬ್ರಹ್ಮಾವರ ಪೊಲೀಸರು ಪ್ರಕರಣ ಒಂದರ ವಿಚಾರಣೆಗೆ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಕರೆದೊಯುತ್ತಿದ್ದ ವೇಳೆ ಕಾರ್ಕಳ ಹೊಸ್ಮಾರಿನಲ್ಲಿ ಅಡಿಷನಲ್ ಎಸ್ಪಿ ಅವರ ವಾಹನಕ್ಕೆ ತಿಮರೋಡಿ ಅವರ ಬೆಂಬಲಿಗರ ಕಾರು ಢಿಕ್ಕಿಯಾದ ಘಟನೆ ಸಂಭವಿಸಿದೆ.

core technologies

ಪೊಲೀಸರು ತಿಮರೋಡಿ ಅವರನ್ನು ವಿಚಾರಣೆಗಾಗಿ ಕರೆದೊಯ್ಯುತ್ತಿದ್ದಾಗ ಈ ಘಟನೆ ನಡೆದಿದೆ. ಕಾರ್ಕಳ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಕಾರ್ಕಳ ಪೊಲೀಸರು ಮೂವರನ್ನು ಬಂಧಿಸಿದ್ದು, ಆರೋಪಿಗಳನ್ನು ಸೃಜನ್, ಹಿತೇಶ್‌ ಶೆಟ್ಟಿ ಮತ್ತು ಸುಜಿತ್ ಮಡಿವಾಲ್‌ ಎಂದು ಗುರುತಿಸಲಾಗಿದೆ.

akshaya college

ಪೊಲೀಸ್ ಮೂಲಗಳ ಪ್ರಕಾರ, ಬ್ರಹ್ಮಾವರ ಪೊಲೀಸರು ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಉಜಿರೆಯಲ್ಲಿರುವ ಅವರ ನಿವಾಸದಿಂದ ಬ್ರಹ್ಮಾವರಕ್ಕೆ ವಿಚಾರಣೆಗಾಗಿ ಕರೆದೊಯ್ಯುತ್ತಿದ್ದಾಗ ಈ ಘಟನೆ ನಡೆದಿದೆ. ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಬಿ.ಎಲ್. ಸಂತೋಷ್ ವಿರುದ್ಧ ತಿಮರೋಡಿ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ರಾಜೀವ್ ಕುಲಾಲ್ ಅವರು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಲಾಗಿದೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts