ಉಡುಪಿ: ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಕೊಲ್ಲೂರು ಘಾಟ್ ರಸ್ತೆಯ ಗುಡ್ಡ ಕುಸಿದಿರುವ ಬಗ್ಗೆ ವರದಿಯಾಗಿದೆ.ಭಾರಿ ಮಳೆಯಿಂದಾಗಿ ಬೆಳಗ್ಗೆ ರಸ್ತೆ ಪಕ್ಕದಲ್ಲಿರುವ ಗುಡ್ಡ ಕುಸಿದಿದ್ದು ಇದರ ಮಣ್ಣು ರಸ್ತೆ ಮೇಲೆ ಬಿದ್ದಿದೆ. ಇದರಿಂದ ಘಾಟ್ ರಸ್ತೆಯ ಸಂಚಾರ ಬಂದ್ ಆಗುವ ಸಾಧ್ಯತೆ ಇದೆ.
ಸ್ಥಳಕ್ಕೆ ಸಂಬಂಧಪಟ್ಟ ಇಲಾಖೆಯವರು ಹಾಗೂ ಪೊಲೀಸರು ಆಗಮಿಸಿ, ಮಣ್ಣು ತೆರವುಗೊಳಿಸುವ ಕಾರ್ಯಚರಣೆ ನಡೆಸಿದ್ದಾರೆ