ಅಪಘಾತ

ರುದ್ರಪ್ರಯಾಗ, ಚಮೋಲಿಯಲ್ಲಿ ಮೇಘಸ್ಪೋಟ!!!

ಈ ಸುದ್ದಿಯನ್ನು ಶೇರ್ ಮಾಡಿ

ಉತ್ತರಾಖಂಡ್: ಗುರುವಾರ (ಆ.28) ತಡರಾತ್ರಿ ಉತ್ತರಾಖಂಡದ ರುದ್ರಪ್ರಯಾಗ ಮತ್ತು ಚಮೋಲಿ ಜಿಲ್ಲೆಗಳಲ್ಲಿ ಮೇಘಸ್ಫೋಟ ಸಂಭವಿಸಿದೆ. ಈ ದುರ್ಘಟನೆಯಲ್ಲಿ ಅನೇಕ ಮಂದಿ ನಾಪತ್ತೆಯಾಗಿದ್ದು ಅವಶೇಷಗಳ ಅಡಿಯಲ್ಲಿ ಸಮಾಧಿಯಾಗಿರುವ ಶಂಕೆ ವ್ಯಕ್ತವಾಗಿದೆ ಜೊತೆಗೆ ಅನೇಕ ಜನರು ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

akshaya college

ಚಮೋಲಿಯ ದೇವಲ್ ಪ್ರದೇಶದ ಮೊಪಾಟಾ ಗ್ರಾಮದಲ್ಲಿ ಇಬ್ಬರು ನಾಪತ್ತೆಯಾಗಿದ್ದು, ಇಬ್ಬರು ಗಾಯಗೊಂಡಿದ್ದಾರೆ. ಜೊತೆಗೆ ದನಗಳ ಕೊಟ್ಟಿಗೆ ಕುಸಿದು ಬಿದ್ದು 15 ರಿಂದ 20 ದನಗಳು ಅವಶೇಷಗಳಡಿ ಸಮಾಧಿಯಾಗಿವೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಘಟನೆಯಿಂದಾಗಿ ಅಪಾರ ಪ್ರಮಾಣದಲ್ಲಿ ಹಾನಿಯಾಗಿದ್ದು ಜನರು ಭಯದಲ್ಲಿ ಜೀವಿಸುವಂತಾಗಿದೆ.

ಮೊಪಾಟಾ ಗ್ರಾಮದಲ್ಲಿ ಇಬ್ಬರು ನಾಪತ್ತೆ:

ಇನ್ನು ಚಮೋಲಿ ಜಿಲ್ಲೆಯ ಮೊಪಾಟಾ ಪ್ರದೇಶದಲ್ಲಿ ತಾರಾ ಸಿಂಗ್ ಮತ್ತು ಅವರ ಪತ್ನಿ ನಾಪತ್ತೆಯಾಗಿದ್ದು ಜೊತೆಗೆ ವಿಕ್ರಮ್ ಸಿಂಗ್ ಮತ್ತು ಅವರ ಪತ್ನಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ರಕ್ಷಣಾ ತಂಡ ಮಾಹಿತಿ ನೀಡಿದೆ ಭಾರೀ ಮಳೆ ರಕ್ಷಣಾ ಕಾರ್ಯಕ್ಕೆ ತೊಂದರೆಯಾಗಿದ್ದು ಅವಶೇಷಗಳನ್ನು ತೆರವುಗೊಳಿಸುವುದು ಕಷ್ಟದ ಕೆಲಸವಾಗಿದೆ ಎಂದು ರಕ್ಷಣಾ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ದುಃಖ ವ್ಯಕ್ತಪಡಿಸಿದ ಸಿಎಂ

ಘಟನೆ ಕುರಿತು ಮುಖ್ಯಮಂತ್ರಿ ಪುಷ್ಕರ್ ಸಿಂಗ್‌ ಧಾಮಿ ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ. ರುದ್ರಪ್ರಯಾಗ ಮತ್ತು ಚಮೋಲಿ ಜಿಲ್ಲೆಗಳಲ್ಲಿ ಮೇಘಸ್ಫೋಟ ಮತ್ತು ಅವಶೇಷಗಳ ಹರಿವಿನಿಂದ ಅನೇಕ ಕುಟುಂಬಗಳು ಸಿಲುಕಿಕೊಂಡಿವೆ ಎಂದು ಅವರು ಸಾಮಾಜಿಕ ಮಾಧ್ಯಮದಲ್ಲಿ ಬರೆದಿದ್ದಾರೆ. ಪರಿಹಾರ ಮತ್ತು ರಕ್ಷಣಾ ಕಾರ್ಯಗಳು ವೇಗವಾಗಿ ನಡೆಯುತ್ತಿವೆ ಮತ್ತು ರಕ್ಷಣಾ ಕಾರ್ಯಕ್ಕೆ ಅಗತ್ಯವಿರುವ ಎಲ್ಲಾ ಸೂಚನೆಗಳನ್ನು ನೀಡಲಾಗಿದೆ ಎಂದು ಅವರು ಹೇಳಿದರು.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಪೆರ್ನಾಜೆ ಬಳಿ ಬಸ್ – ಕಾರು ಅಪಘಾತ! ರಸ್ತೆಯಲ್ಲಿ ಚೆಲ್ಲಿದ್ದ ತೈಲಕ್ಕೆ ಜಾರಿದ ಕೆವಿಜಿ ನಿವೃತ್ತ ಪ್ರಾಂಶುಪಾಲರಿದ್ದ ಕಾರು!!

ಪುತ್ತೂರು: ಸುಳ್ಯದಿಂದ ಪುತ್ತೂರಿಗೆ ಆಗಮಿಸುತ್ತಿದ್ದ ಕಾರು ಹಾಗೂ ಮೈಸೂರು ಕಡೆ ತೆರಳುತ್ತಿದ್ದ…