ಅಪಘಾತ

ಉಜಿರೆ: ಬೈಕ್ -ಟ್ಯಾಂಕರ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್‌ ಸವಾರ ಮೃತ್ಯು!!

ಈ ಸುದ್ದಿಯನ್ನು ಶೇರ್ ಮಾಡಿ

ಉಜಿರೆ: ಚಾರ್ಮಾಡಿ ಕಡೆಯಿಂದ ಬರುತ್ತಿದ್ದ ಬೈಕ್ ಹಾಗೂ ವಿರುದ್ಧ ದಿಕ್ಕಿನಿಂದ ಅಡುಗೆ ಅನಿಲ ಸಾಗಾಟ ಮಾಡುತ್ತಿದ್ದ ಲಾರಿ ನಡುವೆ ಅಪಘಾತ ಸಂಭವಿಸಿದ ಘಟನೆ ಸೆ.3ರಂದು ಉಜಿರೆಯ ಹಳ್ಳಿಮನೆ ಸಮೀಪ ನಡೆದಿದ್ದು, ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ.

akshaya college

ಮೃತಪಟ್ಟ ಬೈಕ್ ಸವಾರನನ್ನು ಕಡಿರುದ್ಯಾವರ ನಿವಾಸಿ ಪುರುಷೋತ್ತಮ ಎಂದು ಗುರುತಿಸಲಾಗಿದೆ.

ಘಟನೆಯಲ್ಲಿ ಬೈಕ್ ಸಂಪೂರ್ಣ ಹಾನಿಯಾಗಿದ್ದು, ಬೈಕ್ ಸವಾರ ಪುರುಷೋತ್ತಮರಿಗೆ ಗಂಭೀರ ಗಾಯಗಳಾಗಿದ್ದು ತಕ್ಷಣ ಹತ್ತಿರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ರವಾನಿಸಲಾಗಿತ್ತು ಆದರೆ ಚಿಕಿತ್ಸೆಗೆ ಸ್ಪಂದಿಸದೆ ಸೆ. 4ರಂದು ನಿಧನರಾದರು. ಮೃತರು ಗಾರೆ ಕಾರ್ಮಿಕರಾಗಿದ್ದರು. ಪತ್ನಿ ಮತ್ತು ಮಕ್ಕಳನ್ನು ಅಗಲಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಪೆರ್ನಾಜೆ ಬಳಿ ಬಸ್ – ಕಾರು ಅಪಘಾತ! ರಸ್ತೆಯಲ್ಲಿ ಚೆಲ್ಲಿದ್ದ ತೈಲಕ್ಕೆ ಜಾರಿದ ಕೆವಿಜಿ ನಿವೃತ್ತ ಪ್ರಾಂಶುಪಾಲರಿದ್ದ ಕಾರು!!

ಪುತ್ತೂರು: ಸುಳ್ಯದಿಂದ ಪುತ್ತೂರಿಗೆ ಆಗಮಿಸುತ್ತಿದ್ದ ಕಾರು ಹಾಗೂ ಮೈಸೂರು ಕಡೆ ತೆರಳುತ್ತಿದ್ದ…