tamanvi
ಅಪಘಾತ

ವಸತಿ ಶಾಲೆಯಲ್ಲಿ ಉಪ್ಪಿಟ್ಟು ತಿಂದು 50ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ!!

D_shiva_bhat

ಈ ಸುದ್ದಿಯನ್ನು ಶೇರ್ ಮಾಡಿ

ಬೆಳಗಾವಿ: ಉಪ್ಪಿಟ್ಟು ತಿಂದು 50ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥರಾದ ಘಟನೆ ಬೆಳಗಾವಿಯ ಚಿಕ್ಕೋಡಿ ತಾಲೂಕಿನ ಹಿರೆಕೋಡಿ ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ನಡೆದಿದೆ.

ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯ ಹಿರೆಕೋಡಿ ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಬೆಳಗ್ಗೆ ಉಪ್ಪಿಟ್ಟು ತಿಂದು 50ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥರಾಗಿರುವಂತ ಘಟನೆ ನಡೆದಿದೆ. ಮಕ್ಕಳನ್ನು ಚಿಕ್ಕೋಡಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಈ ವಸತಿ ಶಾಲೆಯಲ್ಲಿ 400ಕ್ಕೂ ಹೆಚ್ಚು ಮಕ್ಕಳಿದ್ದಾರೆ. ಮೊರಾರ್ಜಿ ವಸತಿ ಶಾಲೆಯಲ್ಲಿ 6 ರಿಂದ ಪಿಯುಸಿವರೆಗೂ ವ್ಯಾಸಂಗ ಮಾಡುತ್ತಿದ್ದಾರೆ. ಇಂತಹ ವಸತಿ ಶಾಲೆಯಲ್ಲಿ ಆಹಾರ ಸೇವಿಸಿ ಅಸ್ವಸ್ಥರಾಗಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿದೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts