ಕಾರು ಡಿಕ್ಕಿಯಾಗಿ ಗಂಭೀರವಾಗಿ ಗಾಯಗೊಂಡಿದ್ದ ಪಾದಚಾರಿಯೊರ್ವರು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ನಡೆದಿದೆ.
ಪುತ್ತೂರು ಬೀಟಿಗೆ ನಿವಾಸಿ ಶಂಶುದ್ದೀನ್ (32) ಮೃತ ದುರ್ದೈವಿ.
ಶಂಶುದ್ದೀನ್ ಅವರು ಮಾಣಿ ಸಮೀಪದ ಗಡಿಯಾರ ಎಂಬಲ್ಲಿರುವ ಸಂಬಂಧಿಕರ ಮನೆಗೆ ಬಂದಿದ್ದರು. ಸಂಬಂಧಿಕರ ಮನೆಯಲ್ಲಿದ್ದ ಇವರು ಹತ್ತಿರದ ಅಂಗಡಿ ಕಡೆಗೆ ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುವ ವೇಳೆ ಕಾರೊಂದು ಡಿಕ್ಕಿಯಾಗಿದೆ ಎನ್ನಲಾಗಿದೆ.
ಕಾರು ಡಿಕ್ಕಿಯಾದ ಪರಿಣಾಮ ಶಂಶುದ್ದೀನ್ ಅವರಿಗೆ ಗಂಭೀರ ಗಾಯವಾಗಿದೆ. ಕೂಡಲೇ ತುಂಬೆ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆಯಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಬಗ್ಗೆ ಪೋಲೀಸರು ಮಾಹಿತಿ ನೀಡಿದ್ದಾರೆ.
JANAPRIYA