ಮಧ್ಯಪ್ರದೇಶ: ಮಧ್ಯಪ್ರದೇಶದ ಮುಖ್ಯಮಂತ್ರಿ ಮೋಹನ್ ಯಾದವ್ ಅವರು ಹಾರಾಡಲು ಸಿದ್ಧತೆ ನಡೆಸಿದ್ದ ಹಾಟ್ ಏರ್ ಬಲೂನ್ ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿರುವ ಘಟನೆ ಶನಿವಾರ (ಸೆ.13) ನಡೆದಿದೆ.
ಸಿಎಂ ಮೋಹನ್ ಯಾದವ್ ಅವರು ಇಂದು (ಸೆ.13) ಮಂದೌರ್ ಜಿಲ್ಲೆಯ ಗಾಂಧಿಸಾಗರ್ ಅರಣ್ಯ ಪ್ರದೇಶದಲ್ಲಿ ಹಾಟ್ ಏರ್ ಬಲೂನ್ ಹಾರಾಟ ನಡೆಸಲು ಸಿದ್ಧತೆ ನಡೆಸುತ್ತಿದ್ದರು. ಈ ವೇಳೆ ಇದ್ದಕಿದ್ದಂತೆ ಎಂಜಿನ್ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ ಕೂಡಲೇ ಅಲ್ಲೇ ಇದ್ದ ಭದ್ರತಾ ಸಿಬ್ಬಂದಿ ಮುಖ್ಯಮಂತ್ರಿಗಳನ್ನು ಕೆಳಗಿಳಿಸಿ ಸುರಕ್ಷಿತ ಸ್ಥಳಕ್ಕೆ ಕರೆದೊಯ್ದಿದ್ದಾರೆ.
ಘಟನೆಯಲ್ಲಿ ಯಾವುದೇ ಸಾವು ನೋವುಗಳು ಸಂಭವಿಸಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಒಂದು ವೇಳೆ ಹಾರಾಟದ ಸಮಯದಲ್ಲಿ ಬೆಂಕಿ ಕಾಣಿಸಿಕೊಂಡಿದ್ದರೆ ಹೆಚ್ಚಿನ ಅನಾಹುತ ಸಂಭವಿಸುತ್ತಿತ್ತು ಎಂದು ಹೇಳಲಾಗಿದೆ.