ದೀಪಾವಳಿ ಹಬ್ಬಕ್ಕೂ ಮುನ್ನವೇ ಪಟಾಕಿ ದುರಂತ ಸಂಭವಿಸಿದೆ. ಆಂಧ್ರ ಪ್ರದೇಶದ ಕೋನಸೀಮ ಜಿಲ್ಲೆಯಲ್ಲಿ ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ ಸಂಭವಿಸಿದ್ದು, 7 ಮಂದಿ ಸಾವನ್ನಪ್ಪಿದ್ದಾರೆ.
ಕೋನಸೀಮ ಜಿಲ್ಲೆಯ ರಾಯವರಂನಲ್ಲಿರುವ ಪಟಾಕಿ ತಯಾರಿಕಾ ಘಟಕದಲ್ಲಿ ಗನ್‌ಪೌಡರ್ ತಯಾರಿಸುವ ಸಮಯದಲ್ಲಿ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡು ಸ್ಫೋಟ ಸಂಭವಿಸಿದೆ. ಘಟನೆಯಲ್ಲಿ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆ ದಾಖಲಿಸಿ ಚಿಕಿತ್ಸೆ ನೀಡಲಾಗ್ತಿದೆ.