ಪಾಣೆಮಂಗಳೂರು ಫೈ ಓವರ್‌ನ ಡಿವೈಡರ್‌ಗೆ ಕಾರು ಢಿಕ್ಕಿ ಹೊಡೆದ ಪರಿಣಾಮ ಪುತ್ತೂರಿನ ಯುವಕನೊಬ್ಬ ಮೃತಪಟ್ಟ ಘಟನೆ ನಡೆದಿದೆ.
ಕುದ್ಮಾರು ನಿವಾಸಿ ಕಾರ್ತಿಕ್(24) ಮೃತ ದುರ್ದೈವಿ.
ಕಾರಿನಲ್ಲಿ ಮೂರು ಮಂದಿ ಪ್ರಯಾಣಿಸುತ್ತಿದ್ದು, ನಿಯಂತ್ರಣ ತಪ್ಪಿ ಡಿವೈಡರ್‌ಗೆ ಗುದ್ದಿದೆ. ಪರಿಣಾಮ ಕಾರ್ತಿಕ್ ಅವರು ಗಂಭೀರವಾಗಿ ಗಾಯಗೊಂಡಿದ್ದರು. ತಕ್ಷಣವೇ ಅವರನ್ನು ಮಂಗಳೂರಿನ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾಗಿ ತಿಳಿದು ಬಂದಿದೆ.

























