ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಡೆಯುತ್ತಿದ್ದ ಮದುವೆಗೆಂದು ಹೊರಟಿದ್ದ ಟಿಟಿ ವಾಹನವೊಂದು ಬಿಸಿಲೆ ಘಾಟ್ ಕ್ರಾಸ್ ಬಳಿ ಅಪಘಾತಕ್ಕೀಡಾಗಿದ್ದು, 20ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ.
ಬಿಸಿಲೆ ಘಾಟ್ ರಸ್ತೆ ತಿರುವಿನಲ್ಲಿ ಅಪಘಾತ ಸಂಭವಿಸಿದ್ದು, ಘಟನೆಗೆ ಕಾರಣ ತಿಳಿದುಬಂದಿಲ್ಲ.
ಕುಕ್ಕೆ ಶ್ರೀ ಸುಬ್ರಹ್ಮಣ್ಯದ ಆದಿ ಸುಬ್ರಹ್ಮಣ್ಯದಲ್ಲಿ ಕೂಡುರಸ್ತೆ ವನಗೂರುನ ವರ ಹಾಗೂ ಏನೆಕಲ್ಲಿನ ವಧು. ವಧು – ವರರು ನಿನ್ನೆಯೇ ಹಾಲಿಗೆ ಬಂದಿದ್ದರು. ಹುಡುಗನ ಕಡೆಯವರು ಟೆಂಪೋದಲ್ಲಿ ಬರುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ.
ಗಾಯಗೊಂಡವರನ್ನು ಸುಬ್ರಹ್ಮಣ್ಯ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಹಾಗೂ 11 ಮಂದಿಯನ್ನು ಪುತ್ತೂರಿನ ಾಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ತಿಳಿದುಬಂದಿದೆ.

























