ಪುತ್ತೂರು: ನೆಹರುನಗರ ಬಳಿ ಆಟೋ ರಿಕ್ಷಾ ಹಾಗೂ ಕಾರು ನಡುವೆ ಅಪಘಾತ ನಡೆದಿದ್ದು, ಐವರು ಗಾಯಗೊಂಡ ಬಗ್ಗೆ ವರದಿಯಾಗಿದೆ.
ಬೆಳ್ಳಾರೆಗೆ ಔಷಧಿಗೆಂದು ಬಂದಿದ್ದ ರಿಕ್ಷಾ ವಾಪಾಸ್ ಮಂಗಳೂರಿನ ಪಜೀರ್ ಕಡೆ ತೆರಳುತ್ತಿದ್ದ ಸಂದರ್ಭ ಅಪಘಾತ ನಡೆದಿದೆ. ರಿಕ್ಷಾದಲ್ಲಿದ್ದ ಮೂವರು ಗಾಯಗೊಂಡಿದ್ದಾರೆ.
ಕಬಕದಿಂದ ಪುತ್ತೂರು ಕಡೆ ತೆರಳುತ್ತಿದ್ದ ಕಾರಿನಲ್ಲಿದ್ದ ಇಬ್ಬರು ಗಾಯಗೊಂಡಿದ್ದಾರೆ. ಐವರನ್ನು ಪ್ರತ್ಯೇಕ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.


























