ಪುತ್ತೂರು: ಪೋಳ್ಯ ಸಮೀಪ ಮಂಗಳವಾರ ಸಂಜೆ ಭೀಕರ ಅಪಘಾತ ಸಂಭವಿಸಿದ್ದು, ಆ್ಯಕ್ಟೀವಾ ಸವಾರ ಗಾಯಗೊಂಡಿದ್ದಾನೆ ಎಂದು ವರದಿಯಾಗಿದೆ.
ಸವಾರನ ಬಗ್ಗೆ ಹೆಚ್ಚಿನ ಮಾಹಿತಿ ತಿಳಿದುಬಂದಿಲ್ಲ.
ಕಾರೊಂದು ಆ್ಯಕ್ಟೀವಾ ಸವಾರನಿಗೆ ಡಿಕ್ಕಿ ಹೊಡೆದಿದೆ ಎಂದು ಹೇಳಲಾಗಿದೆ. ಢಿಕ್ಕಿಯ ರಭಸಕ್ಕೆ ಆ್ಯಕ್ಟೀವಾ ಹಲವಾರು ಪಲ್ಟಿಯಾಗಿ, ಸವಾರ ಸಮೀಪದ ಕೆರೆಗೆ ಎಸೆಯಲ್ಪಟ್ಟಿದ್ದಾನೆ ಎಂದು ತಿಳಿದುಬಂದಿದೆ.
ಅಪಘಾತದಿಂದಾಗಿ ಹೆದ್ದಾರಿಯಲ್ಲಿ ಸಂಚಾರ ಅಸ್ತವ್ಯಸ್ತಗೊಂಡಿದೆ.


























