ಬಂಟ್ವಾಳ: ಬಿ.ಸಿ.ರೋಡಿನ ಸರ್ಕಲ್ ನಲ್ಲಿ ನಡೆದ ಅಪಘಾತದಲ್ಲಿ ಮೂವರು ಮೃತಪಟ್ಟಿದ್ದು, ಆರು ಮಂದಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಮೃತರನ್ನು ಬೆಂಗಳೂರು ಪೀಣ್ಯ ನಿವಾಸಿಗಳಾದ ರವಿ (64), ರಮ್ಯ (23), ಹಾಗೂ ನಂಜಮ್ಮ ( 75) ಎಂದು ಗುರುತಿಸಲಾಗಿದೆ.
ಉಳಿದಂತೆ ಕೀರ್ತಿ, ಸುಶೀಲಾ, ಬಿಂದು ಹಾಗೂ ಪ್ರಶಾಂತ್ ಅವರು ಗಂಭೀರವಾಗಿ ಗಾಯಗೊಂಡಿದ್ದು, ತುರ್ತು ಚಿಕಿತ್ಸಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದುಬಂದಿದೆ.
ಚಾಲಕ ಸುಬ್ರಹ್ಮಣ್ಯ ಹಾಗೂ ಕಿರಣ್ ಅವರು ಅಲ್ಪಸ್ವಲ್ಪ ಗಾಯಗಳೊಂದಿಗೆ ಯಾವುದೇ ಅಪಾಯವಿಲ್ಲದೆ ಪಾರಾಗುವ ಸಾಧ್ಯತೆಗಳಿವೆ ಎಂದು ಹೇಳಲಾಗಿದೆ.
ಮೂರು ಮೃತ ದೇಹಗಳ ಪೈಕಿ ಒಂದು ಬಂಟ್ವಾಳ ಸರಕಾರಿ ಆಸ್ಪತ್ರೆಯಲ್ಲಿ ಹಾಗೂ ಇಬ್ಬರ ಮೃತದೇಹಗಳು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಇರಿಸಲಾಗಿದೆ.



























