tamanvi
ಅಪಘಾತ

ಶಿರಾಡಿ: ಟೆಂಪೊ ಪಲ್ಟಿ – ಬಸ್‌ಗೆ ಡಿಕ್ಕಿ

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ರಾಷ್ಟ್ರೀಯ ಹೆದ್ದಾರಿ 75 ರ ಶಿರಾಡಿ ಘಾಟ್ ಪರಿಸರದ ಕೆಂಪಳ್ಳ ಬಳಿ ಚಾಲಕನ ನಿಯಂತ್ರಣ ತಪ್ಪಿ ಸರಕು ಸಾಗಿಸುತ್ತಿದ್ದ ಟೆಂಪೊ ಪಲ್ಟಿಯಾಗಿ, ಹೆದ್ದಾರಿಯ ಇನ್ನೊಂದು ಬದಿಯಲ್ಲಿ ಬರುತ್ತಿದ್ದ ಖಾಸಗಿ ಬಸ್ಸಿಗೆ ಡಿಕ್ಕಿ ಹೊಡೆದ ಘಟನೆ ಶುಕ್ರವಾರ ನಡೆದಿದೆ.

ಅಪಘಾತದಲ್ಲಿ ಟೆಂಪೊ ಚಾಲಕ ಗಾಯಗೊಂಡಿದ್ದು, ಘಟನೆಯಲ್ಲಿ ಬಸ್ಸಿನ ಮುಂಭಾಗ ಜಖಂಗೊಂಡಿದೆ.

ಅಪಘಾತ ಸಂಭವಿಸಿದ ಕೂಡಲೇ ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts