tamanvi
ಅಪಘಾತ

ಲೋಕಾಯುಕ್ತ ಇನ್ಸ್ ಪೆಕ್ಟರ್ ಸಜೀವ ದಹನ.!

D_shiva_bhat

ಈ ಸುದ್ದಿಯನ್ನು ಶೇರ್ ಮಾಡಿ

ಧಾರವಾಡ: ಕಾರು ಅಪಘಾತದಲ್ಲಿ ಲೋಕಾಯುಕ್ತ ಇನ್ಸ್ ಪೆಕ್ಟರ್ ಸಜೀವ ದಹನವಾದ ಆಘಾತಕಾರಿ ಘಟನೆ ನಡೆದಿದೆ.

maithri

ಧಾರವಾಡ ಜಿಲ್ಲೆ ಅಣ್ಣಿಗೇರಿ ಪಟ್ಟಣದ ಹೊರ ವಲಯದಲ್ಲಿ ಕಾರು ಡಿವೈಡರ್ ಗೆ ಡಿಕ್ಕಿಯಾಗಿ ನಡುರಸ್ತೆಯಲ್ಲಿ ಹೊತ್ತಿ ಉರಿದ ಪರಿಣಾಮ ಲೋಕಾಯುಕ್ತ ಇನ್ಸ್ ಪೆಕ್ಟರ್ ಸಜೀವ ದಹನವಾಗಿದ್ದಾರೆ.

ಹಾವೇರಿ ಲೋಕಾಯುಕ್ತ ಇನ್ಸ್ ಪೆಕ್ಟರ್ ಪಂಚಾಕ್ಷರಿ ಸಾಲಿಮಠ ಮೃತಪಟ್ಟವರು.

ನಿನ್ನೆ i20 ಕಾರ್ ನಲ್ಲಿ ಗದಗ ಕಡೆಗೆ ಪ್ರಯಾಣಿಸುತ್ತಿದ್ದ ವೇಳೆ ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಕಾರು ಡಿಕ್ಕಿಯಾಗಿದೆ. ಈ ವೇಳೆ ಬೆಂಕಿ ಹೊತ್ತಿಕೊಂಡಿದೆ. ಕ್ಷಣಾರ್ಧದಲ್ಲಿ ಬೆಂಕಿ ವ್ಯಾಪಿಸಿದ್ದರಿಂದ ಪಂಚಾಕ್ಷರಿ ಅವರಿಗೆ ಕಾರು ಲಾಕ್ ತೆಗೆದು ಹೊರಬರಲು ಸಾಧ್ಯವಾಗಿಲ್ಲ. ಪರಿಣಾಮ ಅವರು ಕಾರಿನೊಳಗೆ ಸುಟ್ಟು ಕರಕಲಾಗಿದ್ದಾರೆ. ಸ್ಥಳಕ್ಕೆ ಅಣ್ಣಿಗೇರಿ ಠಾಣೆ ಪೋಲೀಸರು ಹಾಗೂ ಅಗ್ನಿಶಾಮಕ ದಳ ಸಿಬ್ಬಂದಿ ಸ್ಥಳಕ್ಕೆ ಬಂದು ಬೆಂಕಿ ನಂದಿಸಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಮಂಗಳೂರಿನಲ್ಲಿ ಸ್ಕೂಟರ್ ಢಿಕ್ಕಿ: ಜಮ್ಮುವಿನಲ್ಲಿ ಸೇವೆ ಸಲ್ಲಿಸುತ್ತಿದ್ದ ಯೋಧ ಕೊಯಿಲ ಸೀತಾರಾಮ ಗೌಡ ಮೃತ್ಯು!!

ಜಮ್ಮುವಿನಲ್ಲಿ ಸೇವೆ ಸಲ್ಲಿಸುತ್ತಿದ್ದ ಯೋಧನೋರ್ವರು ಬುಧವಾರ ಮಂಗಳೂರಿನ ಕೆಪಿಟಿ ಬಳಿ ಸಂಭವಿಸಿದ…