Gl
ಅಪಘಾತ

ಪಟಾಕಿ ಅಂಗಡಿಗೆ ಹೊತ್ತಿ ಉರಿದ ಬೆಂಕಿ: ಲಕ್ಷಾಂತರ ರೂ. ನಷ್ಟ

GL

ಈ ಸುದ್ದಿಯನ್ನು ಶೇರ್ ಮಾಡಿ

ಉಡುಪಿ: ಕುಂದಾಪುರದ ರಥಬೀದಿಯಲ್ಲಿರುವ ಕಟ್ಟಡದಲ್ಲಿ ಸೋಮವಾರ ಬೆಳಗಿನ ಜಾವ ಭಾರೀ ಅಗ್ನಿ ಅವಘಡ ಸಂಭವಿಸಿ, ಹಲವು ಅಂಗಡಿಗಳು ಸಂಪೂರ್ಣವಾಗಿ ಬೆಂಕಿಗೆ ಆಹುತಿಯಾಗಿವೆ.

core technologies

ಕಟ್ಟಡದಲ್ಲಿದ್ದ ಪಟಾಕಿ ಅಂಗಡಿಯಲ್ಲಿ ಮೊದಲು ಬೆಂಕಿ ಕಾಣಿಸಿಕೊಂಡಿದ್ದು, ನಂತರ ಅದು ಪುಸ್ತಕ ಅಂಗಡಿ ಸೇರಿ ಇತರ ಅಂಗಡಿಗಳಿಗೆ ತ್ವರಿತವಾಗಿ ವ್ಯಾಪಿಸಿದೆ ಎಂದು ತಿಳಿದುಬಂದಿದೆ.

ಸೋಮವಾರ ಮುಂಜಾನೆ ಮೂರು ಗಂಟೆಗೆ ಘಟನೆ ನಡೆದಿದ್ದು, ಕುಂದಾಪುರ ಪೇಟೆಯ ವೆಂಕಟರಮಣ ದೇವಸ್ಥಾನದ ಎದುರು ರಥಬೀದಿಯಲ್ಲಿರುವ ಅಂಗಡಿಗಳು ಸುಟ್ಟು ಭಸ್ಮವಾಗಿವೆ. ಅಂಗಡಿಯೊಂದಿಗೆ ಇಡೀ ಕಟ್ಟಡವೇ ಹೊತ್ತಿ ಉರಿದಿದೆ. ಆರಕ್ಕೂ ಅಧಿಕ ಅಂಗಡಿಗಳು ಸುಟ್ಟು ಹೋಗಿವೆ ಎಂದು ಪ್ರಾಥಮಿಕ ವರದಿಗಳು ತಿಳಿಸಿವೆ.

ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳ ದೌಡಾಯಿಸಿದ್ದು, ಬೆಂಕಿ ನಂದಿಸಲು ಹರಸಾಹಸಪಡುತ್ತಿದ್ದಾರೆ. ಪೊಲೀಸರು ಸ್ಥಳಕ್ಕೆ ಧಾವಿಸಿ ಬೆಂಕಿ ನಿಯಂತ್ರಣಕ್ಕೆ ಸಹಕರಿಸುತ್ತಿದ್ದಾರೆ. ಕೋಟ್ಯಂತರ ರೂ. ಮೌಲ್ಯದ ಸೊತ್ತುಗಳು ನಾಶವಾಗಿವೆ ಎಂದು ತಿಳಿದು ಬಂದಿದೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts