ಹುಲಿಕಲ್ ಘಾಟ್ ರಸ್ತೆಯಲ್ಲಿ ಖಾಸಗಿ ಬಸ್ ರಸ್ತೆ ಬದಿಯ ಧರೆಗೆ ಗುದ್ದಿದ ಪರಿಣಾಮ ಮಗು ಸಾವನ್ನಪ್ಪಿದ್ದು, ಹಲವು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡ ಘಟನೆ ಡಿಸೆಂಬರ್ 29ರ ತಡರಾತ್ರಿ ನಡೆದಿದೆ.
ಅಪಘಾತದ ವೇಳೆ ಬಸ್‌ನಲ್ಲಿ ಇದ್ದ ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ.
ದಾವಣಗೆರೆಯಿಂದ ಮಂಗಳೂರು ಕಡೆಗೆ ಬಸ್ ಸಾಗುತ್ತಿತ್ತು. ನಿದ್ದೆಯ ಮಂಪರಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಘಟನೆ ನಡೆದಿದೆ ಎನ್ನಲಾಗಿದೆ. ಘಟನೆಯಿಂದ ಬಸ್ ನ ಮುಂಭಾಗ ಸಂಪೂರ್ಣ ಜಖಂಗೊಂಡಿದೆ.



























