ಪುತ್ತೂರು: ಆರ್ಯಾಪು ಗ್ರಾಮದ ಕಲ್ಲರ್ಪೆಯಲ್ಲಿ ಬುಧವಾರ ಮುಂಜಾನೆ ಕಾರೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಘಟನೆ ನಡೆದಿದೆ.
ಘಟನೆಯಿಂದ ವಿದ್ಯುತ್ ಕಂಬ ತುಂಡಾಗಿದ್ದು, ವಿದ್ಯುತ್ ಕಡಿತ ಉಂಟಾಗಿದೆ. ಸ್ವಿಫ್ಟ್ ಕಾರಿಗೂ ಹಾನಿಯಾಗಿದೆ ಎಂದು ತಿಳಿದುಬಂದಿದೆ.
ಮೆಸ್ಕಾಂ ತಂಡ ಸ್ಥಳಕ್ಕೆ ಆಗಮಿಸಿ ವಿದ್ಯುತ್ ಕಡಿತಗೊಳಿಸಿ. ತುಂಡಾದ ಕಂಬವನ್ನು ತೆರವು ಮಾಡಿದ್ದಾರೆ. ಸಂಪ್ಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.



























