ಅಪಘಾತ

ಹಿಂಬದಿಯಿಂದ ಡಿಕ್ಕಿ ಹೊಡೆದ ಕಾರು, ಲಾರಿ ಚಕ್ರದಡಿ ಬಿದ್ದು ಮೃತಪಟ್ಟ ರಿಕ್ಷಾ ಚಾಲಕ!!

GL

ಈ ಸುದ್ದಿಯನ್ನು ಶೇರ್ ಮಾಡಿ

ಸುಳ್ಯದಲ್ಲಿ ನಡೆದ ಅಪಘಾತದಲ್ಲಿ ರಿಕ್ಷಾ ಚಾಲಕ ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ನಡೆದ ಬಗ್ಗೆ ವರದಿಯಾಗಿದೆ. ಹಿಂಬದಿಯಿಂದ ಡಿಕ್ಕಿ ಹೊಡೆದ ಕಾರು ಚಾಲಕ ಪರಾರಿಯಾಗಿದ್ದಾನೆ ಎಂದು ತಿಳಿದುಬಂದಿದೆ.

chennai-shopping
maithri

ಕೊಡಗು ಸಂಪಾಜೆ ಗೇಟ್ ಬಳಿ ಅಪಘಾತ ಸಂಭವಿಸಿದೆ. ಮೃತರನ್ನು ರಿಕ್ಷಾ ಚಾಲಕ ಸುಂದರ ಚಿಟ್ಟಿಕ್ಕಾನ (56 ವ) ಎಂದು ಗುರುತಿಸಲಾಗಿದೆ.

ರಿಕ್ಷಾಕ್ಕೆ ಹಿಂಬದಿಯಿಂದ ಕಾರು ಢಿಕ್ಕಿ ಹೊಡೆದು, ಪರಾರಿಯಾಗಿದೆ. ಗಂಭೀರ ಗಾಯಗೊಂಡ ರಿಕ್ಷಾ ಚಾಲಕ, ಎದುರಿನಿಂದ ಬರುತ್ತಿದ್ದ ಲಾರಿಯ ಚಕ್ರಕ್ಕೆ ಸಿಲುಕಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆಯಲ್ಲಿ ಚಾಲಕ ಮೃತಪಟ್ಟಿದ್ದರೆ, ಇನ್ನೋರ್ವ ಪ್ರಯಾಣಿಕ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts