ಅಪಘಾತ

ಮಂಗಳೂರು: ಸ್ಕೂಟರ್‌ಗೆ ಬಸ್ ಢಿಕ್ಕಿಯಾಗಿ ಯುವತಿ ಸಾವನ್ನಪ್ಪಿದ ಪ್ರಕರಣ – ಸ್ಥಳೀಯರಿಂದ ಪ್ರತಿಭಟನೆ

GL

ಈ ಸುದ್ದಿಯನ್ನು ಶೇರ್ ಮಾಡಿ

ಮಂಗಳೂರು: ನಗರದ ನಂತೂರು ಪ್ರದೇಶದಲ್ಲಿ ದ್ವಿಚಕ್ರ ವಾಹನಕ್ಕೆ ಖಾಸಗಿ ಬಸ್ ಢಿಕ್ಕಿಯಾಗಿ ಸಹಸವಾರೆ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಯುವತಿ ಸಾವಿಗೆ ನ್ಯಾಯ ಒದಗಿಸುವಂತೆ ಸ್ಥಳೀಯರು ಗುರುವಾರ ಕದ್ರಿ ಪೊಲೀಸ್ ಠಾಣೆಯ ಮುಂಭಾಗದಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ.

chennai-shopping
maithri

ಯುವತಿಯ ಸಾವಿಗೆ ನ್ಯಾಯ ಒದಗಿಸುವಂತೆ ಸ್ಥಳೀಯರು ಯುವತಿಯ ಮೃದೇಹವನ್ನು ಪ್ರತಿಭಟನಾ ಸ್ಥಳಕ್ಕೆ ತಂದು ಪ್ರತಿಭಟನೆ ನಡೆಸುತ್ತಿದ್ದಾರೆ. ಬಸ್ ಚಾಲಕ, ನಿರ್ವಾಹಕನನ್ನು ಬಂಧಿಸುವಂತೆ ಸಾರ್ವಜನಿಕರು ಒತ್ತಾಯಿಸಿದ್ದಾರೆ. ಹಾಗೂ ಸ್ಥಳೀಯರು ರಸ್ತೆ ತಡೆದು ಆಕ್ರೋಶ ಹೊರಹಾಕಿದ್ದಾರೆ.

ಬುಧವಾರ ರಾತ್ರಿ ಮಂಗಳೂರು ನಗರದ ನಂತೂರ್ ಬಳಿ ಈ ಭೀಕರ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಬಲ್ಲಾಳ್‌ಬಾಗ್ ನಿವಾಸಿ ದೀಪ್ತಿ (26) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ದ್ವಿಚಕ್ರ ವಾಹನ ಸವಾರ ಕಿಶೋರ್ (32) ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ದ್ವಿಚಕ್ರ ವಾಹನವು ಬಲ್ಲಾಳ್‌ಬಾಗ್ ಕಡೆಯಿಂದ ವಾಮಂಜೂರು ಕಡೆಗೆ ತೆರಳುತ್ತಿದ್ದ ವೇಳೆ ನಂತೂರು ಬಸ್ ನಿಲ್ದಾಣದ ಸಮೀಪ ಖಾಸಗಿ ಬಸ್ ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಸಹಸವಾರೆ ದೀಪ್ತಿ ಬಸ್‌ನ ಮುಂಭಾಗದ ಚಕ್ರಕ್ಕೆ ಸಿಲುಕಿ ಮುಂದೆ ತಳ್ಳಲ್ಪಟ್ಟಿದ್ದು, ಬಸ್‌ನ ಟಯರ್ ಅವರ ಮೇಲೆ ಹರಿದಿದೆ ಎನ್ನಲಾಗಿದೆ. ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಅದಾಗಲೇ ಯುವತಿ ಕೊನೆಯುಸಿರೆಳೆದಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts