ಅಪಘಾತ

ಹೆದ್ದಾರಿಯಲ್ಲಿ ಚಲಿಸುತ್ತಿದ್ದ ವ್ಯಾನ್ಗೆ ಬೆಂಕಿ: ಸಮಯಪ್ರಜ್ಞೆಯಿಂದ ಚಾಲಕ ಪಾರು!!

GL

ಈ ಸುದ್ದಿಯನ್ನು ಶೇರ್ ಮಾಡಿ

ಮಂಗಳೂರು: ಓಮ್ನಿ ವ್ಯಾನ್‌ಗೆ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡ ಘಟನೆ ಮಂಗಳೂರಿನ ಕೋಟೆಕಾರ್ ಅಡ್ಕ ಸಮೀಪ ಸಂಭವಿಸಿದೆ.

chennai-shopping
maithri

ಹಿಂದಿನಿಂದ ಬರುತ್ತಿದ್ದ ವಾಹನ ಸವಾರರ ಎಚ್ಚರಿಕೆಯ ಪರಿಣಾಮವಾಗಿ ಚಾಲಕ ದೊಡ್ಡ ಅನಾಹುತದಿಂದ ಪಾರಾಗಿದ್ದಾರೆ.ತಲಪಾಡಿ ನಿವಾಸಿ ರಿಯಾಜ್ ಅವರು ಮಧ್ಯಾಹ್ನ ಅಡ್ಕದ ಗ್ಯಾರೇಜ್‌ನಲ್ಲಿ ದುರಸ್ತಿ ಕಾರ್ಯ ಪೂರ್ಣಗೊಂಡಿದ್ದ ತಮ್ಮ ವ್ಯಾನ್‌ನ್ನು ಪಡೆದು ಮನೆಗೆ ಮರಳುತ್ತಿದ್ದರು. ಮಾರ್ಗ ಮಧ್ಯೆ ಪೆಟ್ರೋಲ್ ಬಂಕ್‌ನಲ್ಲಿ ಇಂಧನ ತುಂಬಿಸಿಕೊಂಡ ಬಳಿಕ ತಲಪಾಡಿಯತ್ತ ಪ್ರಯಾಣಿಸುತ್ತಿದ್ದಾಗ ವಾಹನದ ಹಿಂಭಾಗದಿಂದ ಹೊಗೆ ಕಾಣಿಸಿಕೊಂಡಿದೆ. ಆದರೆ, ಆರಂಭದಲ್ಲಿ ರಿಯಾಜ್ ಅವರಿಗೆ ಬೆಂಕಿ ತಗುಲಿರುವುದು ತಿಳಿದಿರಲಿಲ್ಲ.

ಈ ವೇಳೆ ಹಿಂದಿನಿಂದ ಬರುತ್ತಿದ್ದ ವಾಹನ ಸವಾರರು ವ್ಯಾನ್‌ನಲ್ಲಿ ಬೆಂಕಿ ಕಾಣಿಸಿಕೊಂಡಿರುವುದನ್ನು ಗಮನಿಸಿ ತಕ್ಷಣ ಸೂಚನೆ ನೀಡಿದರು. ಎಚ್ಚರಗೊಂಡ ರಿಯಾಜ್ ಅವರು ಕೂಡಲೇ ಹೆದ್ದಾರಿ ಪಕ್ಕದಲ್ಲಿ ವಾಹನ ನಿಲ್ಲಿಸಿ ಹೊರಬಂದರು. ಕೆಲವೇ ಕ್ಷಣಗಳಲ್ಲಿ ವ್ಯಾನ್‌ ಸಂಪೂರ್ಣವಾಗಿ ಅಗ್ನಿಗಾಹುತಿಯಾಗಿ ಸುಟ್ಟು ಕರಕಲಾಗಿದೆ.

ಮಾಹಿತಿ ತಿಳಿದ ತಕ್ಷಣ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಹಾಗೂ ತುರ್ತು ಸೇವಾ ಸಿಬ್ಬಂದಿ ಬೆಂಕಿ ನಂದಿಸಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದರು. ಘಟನೆಯಿಂದ ಯಾರಿಗೂ ಗಾಯಗಳಾಗಿಲ್ಲವೆಂದು ತಿಳಿದುಬಂದಿದೆ. ಅವಘಡಕ್ಕೆ ಕಾರಣ ಏನು ಎಂಬುದರ ಕುರಿತು ಪರಿಶೀಲನೆ ನಡೆಯುತ್ತಿದೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts