ಅಪಘಾತ

ಶಾಲಾ ಬ ಸ್ಗೆ ಮೀನು ಕ್ಯಾಂಟರ್ ಡಿಕ್ಕಿ; 7 ವಿದ್ಯಾರ್ಥಿಗಳಿಗೆ ಗಾಯ!

GL

ಈ ಸುದ್ದಿಯನ್ನು ಶೇರ್ ಮಾಡಿ

ಉಳ್ಳಾಲ: ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾಪಿಕಾಡು ಸಮೀಪ ಸೋಮವಾರ ಬೆಳಗ್ಗೆ ಸಂಭವಿಸಿದ ಅಪಘಾತದಲ್ಲಿ ಶಾಲಾ ಬಸ್‌ಗೆ ಮೀನು ಸಾಗಾಟದ ಕ್ಯಾಂಟರ್ ವಾಹನ ಡಿಕ್ಕಿ ಹೊಡೆದು ಏಳು ವಿದ್ಯಾರ್ಥಿಗಳು ಗಾಯಗೊಂಡ ಘಟನೆ ನಡೆದಿದೆ.

chennai-shopping
maithri

ತಲಪಾಡಿಯ ಶಾರದ  ನಿಕೇತನ ಪಬ್ಲಿಕ್ ಸ್ಕೂಲ್  & ಕಾಲೇಜಿಗೆ ಸೇರಿದ ಬಸ್ ರಸ್ತೆ ಬದಿಯಲ್ಲಿ ವಿದ್ಯಾರ್ಥಿಗಳನ್ನು ಹತ್ತಿಸಿಕೊಂಡು ತಲಪಾಡಿ ಕಡೆಗೆ ತೆರಳುತ್ತಿದ್ದ ವೇಳೆ, ಹಿಂದಿನಿಂದ ವೇಗವಾಗಿ ಬಂದ ಮೀನು ಸಾಗಾಟದ ಕ್ಯಾಂಟರ್ ಬಸ್ಸಿನ ಹಿಂಭಾಗಕ್ಕೆ ಬಲವಾಗಿ ಅಪ್ಪಳಿಸಿದೆ.ಗೋವಾದಿಂದ ಕೇರಳದತ್ತ ಮೀನು ಸಾಗಿಸುತ್ತಿದ್ದ ಕುಂದಾಪುರ ಮೂಲದ ಚಾಲಕ ನಿದ್ರಾಮಂಪರಿನಲ್ಲಿ ವಾಹನ ಚಲಾಯಿಸಿದ್ದೇ ಅಪಘಾತಕ್ಕೆ ಕಾರಣ ಎಂಬುದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ.

ಘಟನೆಯಲ್ಲಿ ನಾಲ್ವರು ವಿದ್ಯಾರ್ಥಿಗಳು ಹಾಗೂ ಮೂವರು ವಿದ್ಯಾರ್ಥಿನಿಯರು ಸಣ್ಣಪುಟ್ಟ ಗಾಯಗಳೊಂದಿಗೆ ತೊಕ್ಕೊಟ್ಟಿನ ನೇತಾಜಿ ಸುಭಾಶ್ ಚಂದ್ರ  ಬೋಸ್  ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದಾರೆ. ಕಾಲಿಗೆ ಹೆಚ್ಚಿನ ಗಾಯವಾದ ವಿದ್ಯಾರ್ಥಿಯೊಬ್ಬರನ್ನು ದೇರಳಕಟ್ಟೆಯ ಕೆ.ಎಸ್ ಹೆಗ್ಡೆ ಆಸ್ಪತ್ರೆಗೆ ದಾಖಲಿಸಲಾಗಿದೆ.

ಅಪಘಾತ ಸಂಭವಿಸಿದಾಗ ಬಸ್ಸಿನಲ್ಲಿ ಒಟ್ಟು 24 ವಿದ್ಯಾರ್ಥಿಗಳು ಪ್ರಯಾಣಿಸುತ್ತಿದ್ದರು. ಅದೃಷ್ಟವಶಾತ್ ದೊಡ್ಡ ಅನಾಹುತ ತಪ್ಪಿದ್ದು, ಪ್ರಕರಣ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts