ಅಪಘಾತ

ಸುಳ್ಯ: ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದು ಅವಘಡ – ಪ್ರಯಾಣಿಕರು ಪಾರು

GL

ಈ ಸುದ್ದಿಯನ್ನು ಶೇರ್ ಮಾಡಿ

ಸುಳ್ಯ: ಚಲಿಸುತ್ತಿದ್ದ ಕಾರಿನ ಮೇಲೆ ಬೃಹತ್ ಮರವೊಂದು ಬಿದ್ದ ಪರಿಣಾಮ ಕಾರು ಸಂಪೂರ್ಣವಾಗಿ ಹಾನಿಗೊಂಡು ಪ್ರಯಾಣಿಕರು ಕೂದಲೆಳೆ ಅಂತರದಿಂದ ಪಾರಾದ ಘಟನೆ ಸುಳ್ಯ–ಬೆಳ್ಳಾರೆ ರಸ್ತೆಯ ಬೆಂಗಮಲೆಯಲ್ಲಿ ಸೋಮವಾರ ಸಂಭವಿಸಿದೆ.

chennai-shopping
maithri

ಮಾಹಿತಿಯ ಪ್ರಕಾರ, ಸುಳ್ಯದ ಬ್ಯಾಂಕ್ ಮ್ಯಾನೇಜರ್ ಉತ್ಸವ್ ಚಕ್ರವರ್ತಿ ಹಾಗೂ ಇನ್ನೊಬ್ಬರು ಸಾಲ ವಸೂಲಾತಿ ಕೆಲಸದ ನಿಮಿತ್ತ ಪಂಜ ಕಡೆಗೆ ಪ್ರಯಾಣಿಸುತ್ತಿದ್ದರು. ಅವರು ಸುಳ್ಯದ ಉಮ್ಮರ್ ಅವರಿಗೆ ಸೇರಿದ ಬಾಡಿಗೆ ಕಾರಿನಲ್ಲಿ ತೆರಳುತ್ತಿದ್ದರು ಎನ್ನಲಾಗಿದೆ.ಬೆಳ್ಳಾರೆಯಿಂದ ಸುಳ್ಯಕ್ಕೆ ಹಿಂತಿರುಗುವ ವೇಳೆ ಬೆಂಗಮಲೆಯಲ್ಲಿ ಚಲಿಸುತ್ತಿದ್ದ ಕಾರಿನ ಮೇಲೆ ಅಕಸ್ಮಿಕವಾಗಿ ಬೃಹತ್ ಮರವೊಂದು ಉರುಳಿಬಿದ್ದಿದೆ. ಪರಿಣಾಮವಾಗಿ ಕಾರು ನಜ್ಜುಗುಜ್ಜಾಗಿದ್ದು, ಭಾರೀ ಹಾನಿ ಸಂಭವಿಸಿದೆ.

ಕಾರಿನಲ್ಲಿದ್ದ ಪ್ರಯಾಣಿಕರು ಪವಾಡಸದೃಶವಾಗಿ ಸಣ್ಣಪುಟ್ಟ ಗಾಯಗಳಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ. ಘಟನೆಯಿಂದ ಸುಮಾರು ಅರ್ಧ ಗಂಟೆ ಕಾಲ ವಾಹನ ಸಂಚಾರಕ್ಕೆ ತೊಂದರೆ ಉಂಟಾಯಿತು. ಬಳಿಕ ಸ್ಥಳೀಯ ನಿವಾಸಿಗಳು ಹಾಗೂ ವಾಹನ ಸವಾರರ ಸಹಕಾರದಿಂದ ಮರವನ್ನು ತೆರವುಗೊಳಿಸಿ ಸಂಚಾರಕ್ಕೆ ಅನುವು ಮಾಡಿಕೊಡಲಾಯಿತು.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts