tamanvi
ಅಪಘಾತ

ಮಂಗಳೂರು: ಬೈಕ್ ಗೆ ಲಾರಿ ಡಿಕ್ಕಿ– ಬೈಕ್ ಸವಾರ ಸ್ಥಳದಲ್ಲೇ ಸಾವು

D_shiva_bhat

ಈ ಸುದ್ದಿಯನ್ನು ಶೇರ್ ಮಾಡಿ

ಮಂಗಳೂರು: ಮಂಗಳೂರು ಹೊರವಲಯದ ಪಣಂಬೂರು ಇಂಡಿಯನ್ ಆಯಿಲ್ ಪೆಟ್ರೋಲ್ ಪಂಪ್ ಮುಂಭಾಗ ಗುರುವಾರ ಸಂಜೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

maithri

ಮೃತರನ್ನು ಮೂಲತಃ ಉತ್ತರ ಕನ್ನಡ ಜಿಲ್ಲೆಯ ಅಂಕೋಲ ತಾಲೂಕಿನವರು ಹಾಗೂ ಸದ್ಯ ಮಂಗಳೂರು ಬಿಜೈಯಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ಶಿವದಾಸ್ ಗಣಪತಿ ನಾಯ್ಕ ಎಂದು ಪೊಲೀಸರು ಗುರುತಿಸಿದ್ದಾರೆ. ಅವರು ಬೈಕಂಪಾಡಿಯ ಔಷಧಿ ತಯಾರಕ ಸಂಸ್ಥೆಯಲ್ಲಿ ಉದ್ಯೋಗ ನಿರ್ವಹಿಸುತ್ತಿದ್ದರು ಎನ್ನಲಾಗಿದೆ.

ಕೆಲಸ ಮುಗಿಸಿಕೊಂಡು ಬಿಜೈಯಲ್ಲಿರುವ ಮನೆಗೆ ತೆರಳುತ್ತಿದ್ದ ವೇಳೆ ಹಿಂದಿನಿಂದ ಬಂದ ಲಾರಿಯೊಂದು ಬೈಕ್‌ಗೆ ಢಿಕ್ಕಿ ಹೊಡೆದ ಪರಿಣಾಮ ಅವರು ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದಾರೆ. ಅಪಘಾತದ ತೀವ್ರತೆಯಿಂದ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಘಟನಾ ಸ್ಥಳಕ್ಕೆ ಮಂಗಳೂರು ಉತ್ತರ ಸಂಚಾರ ಪೊಲೀಸ್ ನಿರೀಕ್ಷಕ ಶಿವಕುಮಾರ್ ಎಂ. ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಮಂಗಳೂರಿನಲ್ಲಿ ಸ್ಕೂಟರ್ ಢಿಕ್ಕಿ: ಜಮ್ಮುವಿನಲ್ಲಿ ಸೇವೆ ಸಲ್ಲಿಸುತ್ತಿದ್ದ ಯೋಧ ಕೊಯಿಲ ಸೀತಾರಾಮ ಗೌಡ ಮೃತ್ಯು!!

ಜಮ್ಮುವಿನಲ್ಲಿ ಸೇವೆ ಸಲ್ಲಿಸುತ್ತಿದ್ದ ಯೋಧನೋರ್ವರು ಬುಧವಾರ ಮಂಗಳೂರಿನ ಕೆಪಿಟಿ ಬಳಿ ಸಂಭವಿಸಿದ…