tamanvi
ಅಪಘಾತ

ಸೈಕಲಿಂದ ಬಿದ್ದು ಗಾಯಗೊಂಡಿದ್ದ ಬಾಲಕ ಆಸೀಫ್ ಮೃತ್ಯು!!

ಈ ಸುದ್ದಿಯನ್ನು ಶೇರ್ ಮಾಡಿ

ವಿಟ್ಲ: ಸೈಕಲ್ ನಿಂದ ಬಿದ್ದ ಬಾಲಕನೋರ್ವ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟ ಘಟನೆ ನಡೆದಿದೆ.

ಕೊಳ್ಳಾಡು ಗ್ರಾಮದ ತಾಳಿತ್ತನೂಜಿ ದೇವಸ್ಯ ನಿವಾಸಿ ಆಸ್ಮ ಎಂಬವರ ಏಕೈಕ ಪುತ್ರ ಆಸೀಫ್ (11 ವ.) ಮೃತ ದುರ್ದೈವಿ.

ಆಸೀಫ್ ರವರು ಸ್ಥಳೀಯ ಮದರಸಾದಲ್ಲಿ ಆಯೋಜಿಸಲಾಗಿದ್ದ ಇಫ್ತಾರ್ ಕೂಟ ಕಾರ್ಯಕ್ರಮದಲ್ಲಿ ಭಾಗವಹಿಸಿ ಮನೆಗೆ ತನ್ನ ಸೈಕಲ್‌ನಲ್ಲಿ ಹಿಂತಿರುಗುವ ಸಂದರ್ಭ ಪಂಜಿಗದ್ದೆ ಎಂಬಲ್ಲಿನ ರಸ್ತೆ ತಿರುವಿನಲ್ಲಿ ನಿಯಂತ್ರಣ ತಪ್ಪಿ ಕೆಳಕ್ಕೆ ಬಿದ್ದಿದ್ದಾರೆ.

ಗಂಭೀರ ಗಾಯಗೊಂಡಿದ್ದ ಆಸೀಫ್ ರನ್ನು ತಕ್ಷಣವೇ ಸ್ಥಳೀಯರು ಚಿಕಿತ್ಸೆಗಾಗಿ ತುಂಬೆಯ ಫಾದರ್ ಮುಲ್ಲರ್ ಆಸ್ಪತ್ರೆಗೆ ಕರೆದೊಯ್ದಿದ್ದರು.ಅಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ಅವರು ಮೃತಪಟ್ಟಿದ್ದಾರೆಂದು ಸ್ಥಳೀಯರು ತಿಳಿಸಿದ್ದಾರೆ.

ಆಸೀಫ್ ರವರು ಕೊಳ್ನಾಡು ಗ್ರಾಮದ ತಾಳಿತ್ತನೂಜಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆರನೇ ತರಗತಿಯ ಪ್ರತಿಭಾವಂತ ವಿದ್ಯಾರ್ಥಿಯಾಗಿದ್ದರು.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts