ಅಪಘಾತ

ಉಪ್ಪಿನಂಗಡಿ: ಕಾರು ಢಿಕ್ಕಿ – ಬೈಕ್‌ ಸವಾರ ಮೃತ್ಯು!!

ಈ ಸುದ್ದಿಯನ್ನು ಶೇರ್ ಮಾಡಿ

ಉಪ್ಪಿನಂಗಡಿ: 34 ನೇ ನೆಕ್ಕಿಲಾಡಿ ಬೊಳ್ಳಾರ್ ಎಂಬಲ್ಲಿ ಬೈಕೊಂದಕ್ಕೆ ಕಾರು ಡಿಕ್ಕಿ ಹೊಡೆದು ಬೈಕ್ ಸವಾರ ಪದ್ಮುಂಜ ಸಹಕಾರಿ ಸಂಘದ ಹಿರಿಯ ಗುಮಾಸ್ತ ಚಿದಾನಂದ ಗೌಡ (56) ಎಂಬವರು ಸಾವನ್ನಪ್ಪಿದ ಘಟನೆ ರವಿವಾರ ಸಂಭವಿಸಿದೆ.

Shani-pooja

ಬಂದಾರು ಗ್ರಾಮದ ಕುರಾಯ ನಿವಾಸಿಯಾಗಿರುವ ಚಿದಾನಂದ ಗೌಡರವರು ಕಾರ್ಯನಿಮಿತ್ತ ಬೈಕ್ ನಲ್ಲಿ ಸಂಚರಿಸುತ್ತಿದ್ದಾಗ ಬೊಳ್ಳಾರ್ ಎಂಬಲ್ಲಿ ಕಾರೊಂದು ಡಿಕ್ಕಿ ಹೊಡೆಯಿತು. ಈ ಪರಿಣಾಮ ಗಂಭೀರವಾಗಿ ಗಾಯಗೊಂಡ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ , ಅಲ್ಲಿ ಅವರು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಉತ್ತಮ ಜನಸ್ನೇಹಿ, ಪರೋಪಕಾರಿ ಗುಣದೊಂದಿಗೆ ಜನಾನುರಾಗಿ ಅವರು ತಾಯಿ, ಪತ್ನಿ, ಇಬ್ಬರು ಮಕ್ಕಳನ್ನು ಅಗಲಿದ್ದಾರೆ. ಪುತ್ತೂರು ಸಂಚಾರಿ ಪೊಲಿಸ್ ಠಾಣೆಯಲ್ಲಿ ಪ್ರಕರಣ ದಾಖಲುಗೊಂಡಿದೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts