tamanvi
ಅಪಘಾತ

ಗುಂಡ್ಯದಲ್ಲಿ ಬಸ್ – ಕಾರು ಭೀಕರ ಅಪಘಾತ: ಮೂವರು ದಾರುಣ ಮೃತ್ಯು!!

ಈ ಸುದ್ದಿಯನ್ನು ಶೇರ್ ಮಾಡಿ

ಉಪ್ಪಿನಂಗಡಿ: ಕೆ.ಎಸ್.ಆರ್.ಟಿ.ಸಿ. ಬಸ್ ಹಾಗೂ ಸ್ವಿಫ್ಟ್ ಡಿಸೈರ್ ಕಾರು ಮುಖಾಮುಖಿ ಢಿಕ್ಕಿಯಾಗಿ ಮೂವರು ದಾರುಣವಾಗಿ ಮೃತಪಟ್ಟ ಘಟನೆ ಶಿರಾಡಿಯಲ್ಲಿ ಶುಕ್ರವಾರ ನಡೆದಿದೆ.

ಬೆಂಗಳೂರು ಕಡೆಯಿಂದ ಬರುತ್ತಿದ್ದ ಸ್ವಿಫ್ಟ್ ಡಿಸೈರ್ ಕಾರು ಹಾಗೂ ಎದುರಿನಿಂದ ಬರುತ್ತಿದ್ದ ಬಸ್ ನಡುವೆ ಡಿಕ್ಕಿ ಸಂಭವಿಸಿದೆ. ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಮೂವರು ಸ್ಥಳದಲ್ಲೇ ಕೊನೆಯುಸಿರೆಳೆದರು ಎಂದು ಸ್ಥಳೀಯರು ತಿಳಿಸಿದ್ದಾರೆ.

ಬಸ್ ಧರ್ಮಸ್ಥಳದಿಂದ ತಿರುಪತಿಗೆ ತೆರಳುತ್ತಿತ್ತು. ಧರ್ಮಸ್ಥಳ ನಿವಾಸಿ ಚಂದ್ರಶೇಖರ ಗೌಡ ಅವರ ಕಾರು ಇದೆಂದು ಹೇಳಲಾಗಿದೆ. ಸದ್ಯಕ್ಕೆ ಮೃತರ ಗುರುತು ಪತ್ತೆಯಾಗಿಲ್ಲ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts