tamanvi
ಅಪಘಾತ

ಕಟಪಾಡಿ ಬಳಿ ಗ್ಯಾಸ್ ಟ್ಯಾಂಕರ್ ಪಲ್ಟಿ, ಸೋರಿಕೆ: ಸ್ಥಳೀಯರಲ್ಲಿ ಆತಂಕ!

D_shiva_bhat

ಈ ಸುದ್ದಿಯನ್ನು ಶೇರ್ ಮಾಡಿ

ಮಂಗಳೂರಿನಿಂದ ಉಡುಪಿ ಕಡೆಗೆ ಸಂಚರಿಸುತ್ತಿದ್ದ ಗ್ಯಾಸ್ ಟ್ಯಾಂಕರ್ ಒಂದು ಸೋಮವಾರ ಬೆಳಿಗ್ಗೆ ಕಟಪಾಡಿ ಬಳಿ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಟ್ಯಾಂಕರ್‌ನಿಂದ ಅನಿಲ ಸೋರಿಕೆಯಾಗುತ್ತಿದೆ ಎಂಬ ವರದಿಯಾದ ಹಿನ್ನೆಲೆ ಸ್ಥಳೀಯರಲ್ಲಿ ಆತಂಕ ಸೃಷ್ಟಿಸಿದೆ.

maithri

ಪ್ರಾಥಮಿಕ ಮಾಹಿತಿಯ ಪ್ರಕಾರ, ಮಂಗಳೂರಿನಿಂದ ಉಡುಪಿ ಮಾರ್ಗವಾಗಿ ಸಾಗುತ್ತಿದ್ದ ಟ್ಯಾಂಕರ್, ಕಟಪಾಡಿ ಬಳಿಯ ಡೈವರ್ಶನ್ ಸಮೀಪ ಚಾಲಕನ ನಿಯಂತ್ರಣ ತಪ್ಪಿ ರಸ್ತೆಗೆ ಉರುಳಿದೆ. ಅಪಘಾತಕ್ಕೆ ನಿಖರವಾದ ಕಾರಣ ಇನ್ನೂ ತಿಳಿದುಬಂದಿಲ್ಲ.

ಘಟನೆಯ ಬೆನ್ನಲ್ಲೇ ಟ್ಯಾಂಕರ್‌ನಿಂದ ಅನಿಲ ಸೋರಿಕೆಯಾಗುತ್ತಿರುವುದು ತಿಳಿದುಬಂದಿದ್ದು, ಈ ಹಿನ್ನೆಲೆ ಸುತ್ತಮುತ್ತಲಿನ ಪ್ರದೇಶದಲ್ಲಿ ಆತಂಕ ಸೃಷ್ಟಿಸಿದೆ. ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಅಧಿಕಾರಿಗಳು ತಕ್ಷಣವೇ ಸ್ಥಳಕ್ಕೆ ಧಾವಿಸಿದ್ದು, ಪರಿಸ್ಥಿತಿಯನ್ನು ನಿಯಂತ್ರಿಸಲು, ಅಹಿತಕರ ಘಟನೆಗಳು ನಡೆಯದಂತೆ ತಡೆಯಲು ಕಾರ್ಯಾಚರಣೆ ಆರಂಭಿಸಿದ್ದಾರೆ.

ಪ್ರಸ್ತುತ ಪರಿಸ್ಥಿತಿ ನಿಯಂತ್ರಣದಲ್ಲಿದ್ದು, ತಜ್ಞರ ತಂಡವು ಟ್ಯಾಂಕರ್ ಅನ್ನು ಸುರಕ್ಷಿತವಾಗಿ ತೆರವುಗೊಳಿಸುವ ಕಾರ್ಯಾಚರಣೆಯಲ್ಲಿ ತೊಡಗಿದೆ. ಸಾರ್ವಜನಿಕರು ಈ ಮಾರ್ಗದಲ್ಲಿ ಸಂಚರಿಸುವಾಗ ಪರ್ಯಾಯ ರಸ್ತೆ ಬಳಸುವಂತೆ ಸೂಚಿಸಲಾಗಿದೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಮಂಗಳೂರಿನಲ್ಲಿ ಸ್ಕೂಟರ್ ಢಿಕ್ಕಿ: ಜಮ್ಮುವಿನಲ್ಲಿ ಸೇವೆ ಸಲ್ಲಿಸುತ್ತಿದ್ದ ಯೋಧ ಕೊಯಿಲ ಸೀತಾರಾಮ ಗೌಡ ಮೃತ್ಯು!!

ಜಮ್ಮುವಿನಲ್ಲಿ ಸೇವೆ ಸಲ್ಲಿಸುತ್ತಿದ್ದ ಯೋಧನೋರ್ವರು ಬುಧವಾರ ಮಂಗಳೂರಿನ ಕೆಪಿಟಿ ಬಳಿ ಸಂಭವಿಸಿದ…