ಅಪಘಾತ

ಪಿಲಿಗೂಡು: ಕ್ರೇನ್ ಢಿಕ್ಕಿಯಾಗಿ ಪಾದಚಾರಿ, ಕೊಳ್ತಿಗೆಯಲ್ಲಿ ವಾಸವಾಗಿದ್ದ ಮಹಾಲಿಂಗಂ ಮೃತ್ಯು!!

GL

ಈ ಸುದ್ದಿಯನ್ನು ಶೇರ್ ಮಾಡಿ

ಉಪ್ಪಿನಂಗಡಿ: ಕ್ರೇನ್ ಢಿಕ್ಕಿ ಹೊಡೆದ ಪರಿಣಾಮ ಪಾದಚಾರಿಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ಬೆಳ್ತಂಗಡಿ ತಾಲೂಕಿನ ಕಣಿಯೂರು ಗ್ರಾಮದ ಪಿಲಿಗೂಡು ಎಂಬಲ್ಲಿ ಏ. 7ರಂದು ನಡೆದಿದೆ.

chennai-shopping
maithri

ತಮಿಳುನಾಡು ಮೂಲದ ಮಹಾಲಿಂಗಂ(53) ಮೃತ ವ್ಯಕ್ತಿ.

ಪುತ್ತೂರು ತಾಲೂಕಿನ ಕೊಳ್ತಿಗೆಯಲ್ಲಿ ವಾಸವಾಗಿದ್ದ ಇವರು ಉಪ್ಪಿನಂಗಡಿ ಕಡೆಯಿಂದ ಪಿಲಿಗೂಡು ಕಡೆಗೆ ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಗುರುವಾಯನಕೆರೆಯಿಂದ ಉಪ್ಪಿನಂಗಡಿ ಕಡೆಗೆ ಬರುತ್ತಿದ್ದ ಕ್ರೇನ್ ಚಾಲಕನ ನಿಯಂತ್ರಣ ತಪ್ಪಿ ಇವರಿಗೆ ಢಿಕ್ಕಿ ಹೊಡೆದಿದೆ. ಢಿಕ್ಕಿಯ ತೀವ್ರತೆಗೆ ಮಹಾಲಿಂಗಂ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಘಟನೆ ಬಗ್ಗೆ ಅವರ ಪುತ್ರ ಸುದಿನ್ ಎಂಬವರು ಪುತ್ತೂರು ಸಂಚಾರಿ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts