ಅಪಘಾತ

ಮಡಂತ್ಯಾರು: ಅಪಘಾತದಲ್ಲಿ ಗಾಯಗೊಂಡಿದ್ದ ವ್ಯಕ್ತಿ ಮೃತ್ಯು!!

GL

ಈ ಸುದ್ದಿಯನ್ನು ಶೇರ್ ಮಾಡಿ

ಎರಡು ದಿನಗಳ ಹಿಂದೆ ಮಡಂತ್ಯಾರು ಸಮೀಪದ ಪಾರೆಂಕಿ ಎಂಬಲ್ಲಿ ದ್ವಿಚಕ್ರ ವಾಹನಗಳ ನಡುವೆ ನಡೆದ ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿಯೋರ್ವರು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ನಡೆದಿದೆ.

maithri

ಪಾರೆಂಕಿ ನಿವಾಸಿ ಕೃಷ್ಣ ( 55) ಮೃತ ವ್ಯಕ್ತಿ.

ಎ.20 ರಂದು ಬೆಳ್ತಂಗಡಿ ತಾಲೂಕಿನ ಪಾರೆಂಕಿ ಗ್ರಾಮದ ಮಾರಿಗುಡಿ ರಾಮನಗರ ಕ್ರಾಸ್ ಬಳಿಯಲ್ಲಿ ಸೈಪುದ್ದೀನ್ ಎಂಬಾತ ಮಡಂತ್ಯಾರುವಿನಿಂದ ಬಳ್ಳಮಂಜ ಕಡೆಗೆ ಬೈಕ್ ನ್ನು ಚಲಾಯಿಸಿಕೊಂಡು ಬಂದು ಬಳ್ಳಮಂಜ ಕಡೆಯಿಂದ ಮಡಂತ್ಯಾರು ಕಡೆಗೆ ಹೋಗುತ್ತಿದ್ದ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದಿದ್ದಾರೆ ಎನ್ನಲಾಗಿದೆ.

ಈ ಸಂದರ್ಭದಲ್ಲಿ ಇಬ್ಬರಿಗೂ ಗಾಯಗಳಾಗಿದ್ದು, ಗಂಭೀರವಾಗಿ ಗಾಯಗೊಂಡಿದ್ದ ಕೃಷ್ಣ ಅವರನ್ನು ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತಾದರೂ , ಅವರು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟ ಬಗ್ಗೆ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts