tamanvi
ಅಪಘಾತ

ಕಡಬ: ನದಿಯಲ್ಲಿ ಮುಳುಗಿ ನಾಪತ್ತೆಯಾಗಿದ್ದ ಯುವಕನ ಮೃತದೇಹ ಪತ್ತೆ!

ಈ ಸುದ್ದಿಯನ್ನು ಶೇರ್ ಮಾಡಿ

ಕಡಬ: ಕುಮಾರಧಾರಾ ನದಿಗೆ ಇಳಿದಿದ್ದ ಯುವಕನೋರ್ವ ನೀರಿನ ಸೆಳೆತಕ್ಕೆ ಸಿಲುಕಿ ನಾಪತ್ತೆಯಾಗಿದ್ದ ಘಟನೆ ಸೋಮವಾರ ಸಂಜೆ ಸಂಭವಿಸಿದ್ದು, ಇದೀಗ ಯುವಕ ಮೃತದೇಹ ಪತ್ತೆಯಾಗಿದೆ ಎಂದು ತಿಳಿದುಬಂದಿದೆ.

ಮೃತ ಯುವಕನನ್ನು ಮರ್ಧಾಳ ನಿವಾಸಿ ಮಂಜು ಎಂಬವರ ಪುತ್ರ ರಕ್ಷಿತ್ (26) ಎಂದು ಗುರುತಿಸಲಾಗಿದೆ.

ರಕ್ಷಿತ್ ಸೋಮವಾರ ಸಂಜೆ ತನ್ನ ಸ್ನೇಹಿತರೊಂದಿಗೆ ಐತ್ತೂರು ಗ್ರಾಮದ ಅರಬ್ಬಿ ತೋಡು ಎಂಬಲ್ಲಿ ಸ್ನಾನಕ್ಕಾಗಿ ತೆರಳಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ಈಜಲು ತಿಳಿದಿದ್ದರೂ, ನೀರಿನ ಸೆಳೆತಕ್ಕೆ ಸಿಲುಕಿದ ರಕ್ಷಿತ್ ನೀರಲ್ಲಿ ಮುಳುಗಿ ನಾಪತ್ತೆಯಾಗಿದ್ದರು ಎಂದು ಸ್ಥಳೀಯರು ತಿಳಿಸಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts