tamanvi
ಅಪಘಾತ

ಉಪ್ಪಿನಂಗಡಿ: ಮಲಗಿದ್ದ ಕಾರ್ಮಿಕನ ಮೇಲೆ ಹರಿದ ರೋಡ್ ರೋಲರ್ – ಮೃತ್ಯು!!

ಈ ಸುದ್ದಿಯನ್ನು ಶೇರ್ ಮಾಡಿ

ಉಪ್ಪಿನಂಗಡಿ: ಚತುಷ್ಪಥ ಹೆದ್ದಾರಿ ಕಾಮಗಾರಿಯ ಭಾಗವಾಗಿ ಸರ್ವೀಸ್ ರಸ್ತೆ ನಿರ್ಮಾಣ ಕಾರ್ಯ ನಡೆಯುತ್ತಿದ್ದ ವೇಳೆ ರೋಡ್ ರೋಲರ್ ಅಡಿಗೆ ಬಿದ್ದು ಕಾರ್ಮಿಕನೋರ್ವ ಮೃತಪಟ್ಟ ಘಟನೆ ಉಪ್ಪಿನಂಗಡಿಯಲ್ಲಿ ನಡೆದಿದೆ.

ಮೇ 9ರಂದು ಘಟನೆ ನಡೆದಿದ್ದು, ಉತ್ತರ ಭಾರತ ಮೂಲದ ಕಾರ್ಮಿಕ ಮೃತಪಟ್ಟಿರುವುದಾಗಿ ತಿಳಿದುಬಂದಿದೆ.

ಕಾಮಗಾರಿ ವೇಳೆ ರಸ್ತೆ ಬದಿ ಕಾರ್ಮಿಕ ಮಲಗಿದ್ದ. ಆ ಸಂದರ್ಭ ಕಾಮಗಾರಿಯಲ್ಲಿ ಭಾಗಿಯಾಗಿದ್ದ ರೋಡ್ ರೋಲರ್ ಆತನ ಮೇಲೆ ಹರಿದಿದೆ. ಪರಿಣಾಮ ಆತ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಅಪಘಾತದ ತೀವ್ರತೆಗೆ ದೇಹ ಪುಡಿಯಾಗಿದೆ.

ಘಟನೆಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts