tamanvi
ಅಪಘಾತ

ಪುಣಚ: ಕೋಳಿ ಕೊಂಡೊಯ್ಯುತ್ತಿದ್ದ ಪಿಕಪ್ – ಬೈಕ್ ಡಿಕ್ಕಿಯಾಗಿ ಸವಾರನಿಗೆ ಗಂಭೀರ ಗಾಯ!!

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಪುಣಚದ ಪಾಲಸ್ತಡ್ಕದಲ್ಲಿ ಕೋಳಿ ಕೊಂಡೊಯ್ಯುತ್ತಿದ್ದ ಪಿಕಪ್ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿದ ಘಟನೆ ಬುಧವಾರ ರಾತ್ರಿ ನಡೆದಿದೆ.

ಘಟನೆಯಲ್ಲಿ ಬೈಕ್ ಸವಾರ ಸರೋಳಿಕಾನ‌ ನಿವಾಸಿ ಶಶಿತ್ ಗಂಭೀರ ಗಾಯಗೊಂಡಿದ್ದಾರೆ.

ವಿಟ್ಲ ಪುಣಚ ರಸ್ತೆಯಾಗಿ ಸರೋಳಿಕಾನಕ್ಕೆ ತೆರಳುತ್ತಿದ್ದ ಬೈಕಿಗೆ ಎದುರಿನಿಂದ ಬಂದ ಪಿಕಪ್ ಡಿಕ್ಕಿ ಹೊಡೆದಿದೆ. ಮದುವೆ ಕಾರ್ಯಕ್ರಮದ ಹಿನ್ನೆಲೆಯಲ್ಲಿ ರಸ್ತೆ ಬದಿ ವಾಹನಗಳು ಸಾಲುಗಟ್ಟಿ ನಿಂತಿದ್ದು, ಪಿಕಪ್ ಬೈಕ್ ಸವಾರನ ಕಾಲಿಗೆ ತಾಗಿದೆ. ಇದರಿಂದ ನಿಯಂತ್ರಣ ಕಳೆದುಕೊಂಡ ಬೈಕ್ ಪಿಕಪಿಗೆ ಡಿಕ್ಕಿ ಹೊಡೆದಿದೆ ಎಂದು ತಿಳಿದುಬಂದಿದೆ.

ಅಪಘಾತದ ರಭಸಕ್ಕೆ ಬೈಕ್ ಸವಾರನ ಕಾಲಿಗೆ ಬಲವಾದ ಏಟು ಬಿದ್ದಿದ್ದು, ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿಗೆ ಕರೆದೊಯ್ಯಲಾಗಿದೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts