tamanvi
ಅಪಘಾತ

ಪಂಜಳ: ಕಂದಕಕ್ಕೆ ಉರುಳಿದ ಕಾರು!!

D_shiva_bhat

ಈ ಸುದ್ದಿಯನ್ನು ಶೇರ್ ಮಾಡಿ

ಕೊಕ್ಕಡದ ಪಟ್ಟೂರಿಗೆ ತೆರಳುತ್ತಿದ್ದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಉಪ್ಪಿನಂಗಡಿ ಸಮೀಪದ ಪಂಜಳ ಎಂಬಲ್ಲಿ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಬದಿಯ ಸುಮಾರು 70 ಅಡಿ ಆಳದ ಕಂದಕಕ್ಕೆ ಉರುಳಿ ಬಿದ್ದ ಘಟನೆ ಮೇ 22ರಂದು ಸಂಜೆ ನಡೆದಿದೆ.

ಅಪಘಾತಕ್ಕೀಡಾದ ಕಾರಿನಲ್ಲಿ ಪಟ್ರಮೆ ಗ್ರಾಮದ ದೇರಾಜೆ ನಿವಾಸಿ ಹಾಗೂ ಪಟ್ಟೂರು ಶ್ರೀರಾಮ ವಿದ್ಯಾಸಂಸ್ಥೆಯ ಸಂಚಾಲಕ ಪ್ರಶಾಂತ್ ದೇರಾಜೆ ಮತ್ತು ಅವರ ಸಹೋದರ ಪ್ರವೀಣ್ ದೇರಾಜೆ ಪ್ರಯಾಣಿಸುತ್ತಿದ್ದರು. ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಕಾರು ಹೆದ್ದಾರಿ ಬದಿಯಿಂದ ಕೆಳಕ್ಕೆ ಉರುಳಿ ನದಿ ಬದಿಯ ಆಳವಾದ ಕಂದಕಕ್ಕೆ ಬಿದ್ದಿದೆ. ಘಟನೆಯ ತೀವ್ರತೆಗೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಕಾರಿನಲ್ಲಿದ್ದವರು ಅಲ್ಪಸ್ವಲ್ಪ ತರಚು ಗಾಯಗಳೊಂದಿಗೆ ಅದೃಷ್ಟವಶಾತ್ ಅಪಾಯದಿಂದ ಪಾರಾಗಿದ್ದಾರೆ.

ಅಪಘಾತದ ಸುದ್ದಿ ತಿಳಿಯುತ್ತಿದ್ದಂತೆ ಸ್ಥಳೀಯರು ಹಾಗೂ ಪರಿಚಿತರು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯದಲ್ಲಿ ಸಹಕರಿಸಿದರು.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಮಂಗಳೂರಿನಲ್ಲಿ ಸ್ಕೂಟರ್ ಢಿಕ್ಕಿ: ಜಮ್ಮುವಿನಲ್ಲಿ ಸೇವೆ ಸಲ್ಲಿಸುತ್ತಿದ್ದ ಯೋಧ ಕೊಯಿಲ ಸೀತಾರಾಮ ಗೌಡ ಮೃತ್ಯು!!

ಜಮ್ಮುವಿನಲ್ಲಿ ಸೇವೆ ಸಲ್ಲಿಸುತ್ತಿದ್ದ ಯೋಧನೋರ್ವರು ಬುಧವಾರ ಮಂಗಳೂರಿನ ಕೆಪಿಟಿ ಬಳಿ ಸಂಭವಿಸಿದ…