ಅಪಘಾತ

ಕಾರವಾರ ನದಿ ದುರಂತ: ಸಾವಿನ ಸಂಖ್ಯೆ 11ಕ್ಕೆ ಏರಿಕೆ | ಸಿಎಂ ಸಿದ್ದರಾಮಯ್ಯ ಸಂತಾಪ: ಪರಿಹಾರ ಘೋಷಣೆ

ಈ ಸುದ್ದಿಯನ್ನು ಶೇರ್ ಮಾಡಿ

ಕಾರವಾರ: ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಸಂಭವಿಸಿದ ಭೀಕರ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 11ಕ್ಕೆ ಏರಿಕೆಯಾಗಿದೆ.

maithri

ಭಾನುವಾರ 10 ಜನರ ಮೃತದೇಹ ಪತ್ತೆಯಾಗಿದ್ದವು, ಇಂದು ಮತ್ತೊಂದು ಮೃತದೇಹ ಪತ್ತೆಯಾಗಿದೆ. ಮೃತ ವ್ಯಕ್ತಿಯನ್ನ ಮಾದೇವ್ ನಾಯ್ಕ್ ಎಂದು ಗುರುತಿಸಲಾಗಿದೆ.

ನದಿಯಲ್ಲಿ ನಾಪತ್ತೆಯಾಗಿದ್ದವರಿಗಾಗಿ ಇಂದು ಬೆಳಿಗ್ಗೆ 8 ಗಂಟೆಯಿಂದ ಎನ್‌ಡಿಆರ್‌ಎಫ್ ತಂಡ ಶೋಧ ಕಾರ್ಯಾಚರಣೆ ನಡೆಸಿತ್ತು. ಈ ವೇಳೆ ಕಾಣೆಯಾಗಿದ್ದ ಮಾದೇವ್ ನಾಯ್ಕ್ ಅವರ ಮೃತದೇಹ ತಟ್ಟೆಹಕ್ಕಲು ನದಿಯ ಅಳವೆಯಲ್ಲಿ ಪತ್ತೆಯಾಗಿದೆ.

ಈ ಅವಘಡದಲ್ಲಿ 11 ಮಂದಿ ಸಾವನ್ನಪ್ಪಿದ್ದು, 8 ಜನ ಒಂದೇ ಕುಟುಂಬದವರು ಎಂಬುದು ದೃಢಪಟ್ಟಿದೆ.

ಲಕ್ಷ್ಮಿ ಮಾದೇವ ನಾಯ್ಕ(42), ಲಕ್ಷ್ಮಿ ಶಿವರಾಂ ನಾಯ್ಕ( 39), ಲಕ್ಷ್ಮಿ ಅಣ್ಣಪ್ಪ ನಾಯ್ಕ(44), ಜ್ಯೂತಿ ನಾಗಪ್ಪ ನಾಯ್ಕ( 34) , ಮಾಲತಿ ಜಟ್ಟಪ್ಪ ನಾಯ್ಕ (40), , ಉಮೇಶ್ ಎಂ.ನಾಯ್ಕ (42), ಮಾಸ್ತಮ್ಮ ಎಂ.ನಾಯ್ಕ(42), ಮಾದೇವ ಭೈರಪ್ಪ ನಾಯ್ಕ ( 45), ಮಂಜಮ್ಮ ಗೋಯ್ದ ನಾಯ್ಕ(40), ನಾಗರತ್ನ ಪರಮೇಶ್ವರ ನಾಯ್ಕ (38 ) ಮೃತಪಟ್ಟವರು ಎಂದು ತಿಳಿದು ಬಂದಿದೆ.
ಅಸ್ತಸ್ಥರಾಗಿರುವ ನಾಗರತ್ನ, ಮಾಹಾದೇವಿ ಎಂಬುವವರನ್ನು ಹೆಚ್ಚಿನ ಚಿಕಿತ್ಸೆ ಗಾಗಿ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ.‌

ನದಿಯ ನೀರಿನಲ್ಲಿ ಕಾಣೆಯಾಗಿದ್ದ ಶವಗಳನ್ನು ಪತ್ತೆ ಹಚ್ಚಲು ಎನ್‌ಡಿಆರ್‌ಫ್ ತಂಡದ ಶೋಧ ಕಾರ್ಯಾಚರಣೆಯಲ್ಲಿ ಮುಳುಗು ತಜ್ಞರು ಕಾರ್ಯಾಚರಣೆ ನಡೆಸಿದ್ದರು. ಅಗ್ನಿಶಾಮಕ ದಳ ಹಾಗೂ ಎನ್‌ಡಿಆರ್‌ಎಫ್ ತಂಡಗಳು ಪ್ರತ್ಯೇಕವಾಗಿ ಶೋಧ ನಡೆಸಿದ್ದವು. ಇದಕ್ಕೆ ಸ್ಥಳೀಯ ಮೀನುಗಾರರು ಸಾಥ್ ನೀಡಿದರು.

ಸಂಬಂಧಿಕರ ಆಕ್ರಂದನ :

ನದಿ ಸಮುದ್ರದಲ್ಲಿ ಕೊಚ್ಚಿಹೋದವರ ಪೈಕಿ ಆರು ಮೃತದೇಹಗಳನ್ನು ಭಟ್ಕಳದ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದ್ದು, ಉಳಿದ ಎರಡು ಮೃತದೇಹಗಳನ್ನು ಆರ್.ಎನ್.ಎಸ್ ಆಸ್ಪತ್ರೆಗೆ ರವಾನಿಸಲಾಗಿದೆ. ಒಂದೇ ಕುಟುಂಬದ ಎಂಟು ಮಂದಿ ಅಸುನೀಗಿದ ಸುದ್ದಿ ತಿಳಿದು ಆಸ್ಪತ್ರೆಯ ಬಳಿ ಜಮಾಯಿಸಿರುವ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ.

ಘಟನೆ ಕುರಿತಂತೆ ಪೊಲೀಸ್ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದ್ದು, ನಾಪತ್ತೆಯಾದವರಿಗಾಗಿ ಶೋಧ ಕಾರ್ಯಾಚರಣೆ ಹಾಗೂ ಹೆಚ್ಚಿನ ತನಿಖೆ ಮುಂದುವರಿದಿದೆ.ಸ್ಥಳದಲ್ಲಿ ಜಿಲ್ಲಾ ಉಸ್ತುವಾರಿ

ಸಿಎಂ ಸಿದ್ದರಾಮಯ್ಯ ಸಂತಾಪ: ಪರಿಹಾರ ಘೋಷಣೆ

ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ಸಮೀಪದ ತಟ್ಟೆಹಕ್ಕಲು ಕಡಲ ತೀರದಲ್ಲಿ ಕಪ್ಪೆಚಿಪ್ಪು ತರಲು ಹೋದವರ ಪೈಕಿ ಒಂದೇ ಕುಟುಂಬದ ಎಂಟು ಮಂದಿ ನೀರಿನಲ್ಲಿ ಮುಳುಗಿ ಸಾವಿಗೀಡಾಗಿದ ಸುದ್ದಿ ತಿಳಿದು ಸಂಕಟವಾಯಿತು. ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ ಎಂದಿದ್ದಾರೆ.

ಇದೊಂದು ಅತ್ಯಂತ ದುರದೃಷ್ಟಕರ ಮತ್ತು ನೋವಿನ ಘಟನೆ. ದುರಂತದಲ್ಲಿ ಮಡಿದವರ ಕುಟುಂಬಕ್ಕೆ ಮಾನವೀಯ ನೆಲೆಯಲ್ಲಿ ರಾಜ್ಯ ಸರ್ಕಾರದಿಂದ ತಲಾ 5 ಲಕ್ಷ ರೂಪಾಯಿ ಪರಿಹಾರ ನೀಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಇನ್ನೂ ಕೆಲವರು ಈ ದುರ್ಘಟನೆಯಲ್ಲಿ ಕಾಣೆಯಾಗಿರುವ ಮಾಹಿತಿಯಿದ್ದು, ಅವರಿಗಾಗಿ ತೀವ್ರ ಹುಡುಕಾಟ ನಡೆಸಲಾಗುತ್ತಿದೆ. ಕಾಣೆಯಾದವರು ಬದುಕಿಬಂದು ತಮ್ಮವರನ್ನು ಕೂಡಿಕೊಳ್ಳಲಿ‌ ಎಂದು ನಾವೆಲ್ಲರೂ ದೇವರಲ್ಲಿ ಪ್ರಾರ್ಥಿಸೋಣ ಎಂದಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಮಂಗಳೂರಿನಲ್ಲಿ ಸ್ಕೂಟರ್ ಢಿಕ್ಕಿ: ಜಮ್ಮುವಿನಲ್ಲಿ ಸೇವೆ ಸಲ್ಲಿಸುತ್ತಿದ್ದ ಯೋಧ ಕೊಯಿಲ ಸೀತಾರಾಮ ಗೌಡ ಮೃತ್ಯು!!

ಜಮ್ಮುವಿನಲ್ಲಿ ಸೇವೆ ಸಲ್ಲಿಸುತ್ತಿದ್ದ ಯೋಧನೋರ್ವರು ಬುಧವಾರ ಮಂಗಳೂರಿನ ಕೆಪಿಟಿ ಬಳಿ ಸಂಭವಿಸಿದ…