tamanvi
ಅಪಘಾತ

ಮಾಣಿಯಲ್ಲಿ ಅಪಘಾತ: ಡಿಯೋ ಸವಾರ ಮೂಲತಃ ಸುಳ್ಯದ, ಮಲಾರ್ ನಿವಾಸಿ ಮೃತ್ಯು!!

D_shiva_bhat

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಮಾಣಿ ಸಮೀಪ ಸೋಮವಾರ ಸಂಭವಿಸಿದ ರಸ್ತೆ ಅಪಘಾತದಲ್ಲಿ ಡಿಯೋ ಸ್ಕೂಟರ್ ಸವಾರರೊಬ್ಬರು ಮೃತಪಟ್ಟಿದ್ದಾರೆ.

ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಸವಾರ ಕಲಂದರ್ ಶಾ ಅವರು ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ. ಅವರು ಮೂಲತಃ ಸುಳ್ಯ ನಿವಾಸಿಯಾಗಿದ್ದು, ಪ್ರಸ್ತುತ ಪುತ್ತೂರಿನ ಮಲಾರಿನಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದು, ಮಂಗಳೂರು ಧಕ್ಕೆಯಲ್ಲಿ ಕೆಲಸ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ.

ಕಲ್ಲಡ್ಕದಿಂದ ಪುತ್ತೂರಿನತ್ತ ಬರುತ್ತಿದ್ದ ಡಿಯೋ ಸ್ಕೂಟರ್‌ (ಕೆಎ-21 ಇಡಿ 8227) ಲಾರಿಯ ಹಿಂಭಾಗಕ್ಕೆ ಡಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೃತರು ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ. ಘಟನೆಯ ಕುರಿತು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts