tamanvi
ಅಪಘಾತ

ಧರ್ಮಸ್ಥಳ ಗ್ರಾಮದಲ್ಲಿ ಹೂತಿಟ್ಟ ಶವ ಪ್ರಕರಣದ ತನಿಖಾ ತಂಡದ ಅಧಿಕಾರಿಗಳ ಕಾರು ಪಲ್ಟಿ!!

ಈ ಸುದ್ದಿಯನ್ನು ಶೇರ್ ಮಾಡಿ

ಧರ್ಮಸ್ಥಳ ಗ್ರಾಮದಲ್ಲಿ ಶವ ಹೂತಿಡಲಾಗಿದೆ ಎನ್ನಲಾದ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್‌ ಐಟಿ ತಂಡದ ಎಸ್ಪಿ ಸೈಮನ್ ಮತ್ತು ಇತರ ಅಧಿಕಾರಿಗಳು ಪ್ರಯಾಣಿಸುತ್ತಿದ್ದ ಇನೋವಾ ಕಾರು ಚಾರ್ಮಾಡಿಯಲ್ಲಿ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಮಂಗಳವಾರ ನಡೆದಿದೆ.

ಬೆಳ್ತಂಗಡಿ ಎಸ್‌ ಐಟಿ ಕಚೇರಿಯಿಂದ ಎಸ್ಪಿ ಸಿ.ಎ.ಸೈಮನ್, ಇನ್ಸ್‌ ಪೆಕ್ಟ‌ರ್ ಕುಸುಮಾಧರ್, ಸಿಬ್ಬಂದಿ ಪಿಸಿ ಮಂಜುನಾಥ್ ಅವರು ಚಿಕ್ಕಮಗಳೂರು ಜಿಲ್ಲಾ ಎಸ್ಪಿ ಹಾಗೂ ಎಸ್‌ ಐಟಿ ತನಿಖಾಧಿಕಾರಿಯಾಗಿರುವ ಜಿತೇಂದ್ರ ಕುಮಾ‌ರ್ ದಯಾಮ ಅವರನ್ನು ಭೇಟಿ ಮಾಡಲು ಚಿಕ್ಕಮಗಳೂರು ಕಡೆ ತೆರಳುತ್ತಿದ್ದಾಗ ಘಟನೆ ನಡೆದಿದೆ ಎನ್ನಲಾಗಿದೆ.

ಕಾರಿನಲ್ಲಿ ಚಾಲಕ ಸೇರಿ ಒಟ್ಟು 4 ಜನ ಪ್ರಯಾಣಿಸುತ್ತಿದ್ದರು. ಘಟನೆಯಲ್ಲಿ ಅಧಿಕಾರಿಗಳು ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.

ಕಾರು ದಿಬ್ಬಕ್ಕೆ ಗುದ್ದಿ ಪಲ್ಟಿಯಾದ ರಭಸಕ್ಕೆ ಹಾನಿಯಾಗಿದ್ದು, ಈ ಬಗ್ಗೆ ಬೆಳ್ತಂಗಡಿ ಸಂಚಾರಿ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts