ಅಪಘಾತ

ಕಾರು ಢಿಕ್ಕಿ – ದ್ವಿಚಕ್ರ ವಾಹನ ಸವಾರ ಮೃತ್ಯು!!

ಈ ಸುದ್ದಿಯನ್ನು ಶೇರ್ ಮಾಡಿ

ಬಂಟ್ವಾಳ : ಕಾರು ಢಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರ ಯುವಕನೋರ್ವ ಮೃತಪಟ್ಟ ಘಟನೆ ಸಜಿಪನಡು ಸಮೀಪದ ದೇರಾಜೆ ಎಂಬಲ್ಲಿ ಗುರುವಾರ ಸಂಜೆ ವೇಳೆ ಸಂಭವಿಸಿದೆ.

maithri

ಮೃತ ಸ್ಕೂಟರ್ ಸವಾರನನ್ನು ಸಜಿಪನಡು ‌ಸಮೀಪದ ಮಡ್ಯಲಚ್ಚಿಲ್ ನಿವಾಸಿ ಅಬ್ದುಲ್ ರಹಿಮಾನ್ ಎಂಬವರ ಪುತ್ರ ಅಹ್ಮದ್ ಅಸೀರ್ (22) ಎಂದು ತಿಳಿದುಬಂದಿದೆ.

ಗುರುವಾರ ಸಂಜೆ ಅಸೀರ್ ತನ್ನ ಆಕ್ಟಿವಾ ಸ್ಕೂಟರಿನಲ್ಲಿ ಸಜಿಪದಿಂದ ಬೇಂಕೆ ಕಡೆಗೆ ಸಂಚರಿಸುತ್ತಿದ್ದ ವೇಳೆ ಎದುರಿನಿಂದ ಬಂದ ಕಾರು ಢಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ. ಈ ವೇಳೆ ರಸ್ತೆಗೆಸೆಯಲ್ಪಟ್ಟು ತಲೆಗೆ ಗಂಭೀರ ಗಾಯಗೊಂಡ ಅಸೀರ್ ಅವರನ್ನು ತಕ್ಷಣ ಸ್ಥಳೀಯರು ಆಸ್ಪತ್ರೆಗೆ ಸಾಗಿಸಿದರೂ ಅದಾಗಲೇ ಅವರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಮೃತ ಅಸೀರ್ ಅವರು ಎಸ್ಕೆಸ್ಸೆಸ್ಸೆಫ್ ಸಂಘಟನೆಯ ಸಮಾಜಮುಖಿ ವಿಕಾಯ ಸಂಘಟನೆಯ ಆಕ್ಟಿವ್ ವಿಂಗ್ ಸದಸ್ಯರಾಗಿದ್ದು, ಸಮಾಜ ಸೇವಾ ಕಾರ್ಯಗಳಲ್ಲಿ ಸದಾ ಮುಂಚೂಣಿಯಲ್ಲಿರುತ್ತಿದ್ದ ಎಂದು ತಿಳಿದು ಬಂದಿದೆ. ಅಸೀರ್ ಅವರು ತಂದೆ, ತಾಯಿ, ನಾಲ್ವರು ಸಹೋದರರು ಹಾಗೂ ಮೂವರು ಸಹೋದರಿಯರನ್ನು ಅಗಲಿದ್ದಾರೆ.

ಘಟನಾ ಸ್ಥಳಕ್ಕೆ ಬಂಟ್ವಾಳ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts