tamanvi
ಅಪಘಾತ

ಪೆರಿಯಶಾಂತಿ: ಬೈಕ್’ಗಳ ಡಿಕ್ಕಿ – ಓರ್ವ ಮೃತ್ಯು, ಇನ್ನೋರ್ವ ಗಂಭೀರ!!

D_shiva_bhat

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು–ಮಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಕೌಕ್ರಾಡಿ ಗ್ರಾಮದ ಪರಿಯಶಾಂತಿ ಬಳಿ ಬುಧವಾರ ಎರಡು ಬೈಕ್‌ಗಳ ನಡುವೆ ಸಂಭವಿಸಿದ ಅಪಘಾತದಲ್ಲಿ ಓರ್ವ ಸವಾರ ಮೃತಪಟ್ಟಿದ್ದು, ಮತ್ತೋರ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ.

maithri

ಮೃತರನ್ನು ಕಾಸರಗೋಡು ಜಿಲ್ಲೆಯ ಏರಿಕ್ಕುಲಂ ನಿವಾಸಿ ರಿಜೇಶ್ ವಿ. (33) ಎಂದು ಗುರುತಿಸಲಾಗಿದೆ. ಗಾಯಾಳು ಕೊಕ್ಕಡ ಗ್ರಾಮದ ಹಳಿಂಗೇರಿ ನಿವಾಸಿ ಗಿರೀಶ್.

ಗುಂಡ್ಯದಿಂದ ಕೊಕ್ಕಡ ಕಡೆಗೆ ಬರುತ್ತಿದ್ದ ಗಿರೀಶ್ ಅವರ ಬೈಕ್‌ ತಿರುಗಿಸುವ ವೇಳೆ ಹಿಂಬದಿಯಿಂದ ಬಂದ ರಿಜೇಶ್ ಅವರ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ. ಅಪಘಾತದ ತೀವ್ರತೆಗೆ ರಿಜೇಶ್ ಸ್ಥಳದಲ್ಲೇ ಮೃತಪಟ್ಟರೆ, ಗಾಯಗೊಂಡ ಗಿರೀಶ್ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಮಂಗಳೂರಿನಲ್ಲಿ ಸ್ಕೂಟರ್ ಢಿಕ್ಕಿ: ಜಮ್ಮುವಿನಲ್ಲಿ ಸೇವೆ ಸಲ್ಲಿಸುತ್ತಿದ್ದ ಯೋಧ ಕೊಯಿಲ ಸೀತಾರಾಮ ಗೌಡ ಮೃತ್ಯು!!

ಜಮ್ಮುವಿನಲ್ಲಿ ಸೇವೆ ಸಲ್ಲಿಸುತ್ತಿದ್ದ ಯೋಧನೋರ್ವರು ಬುಧವಾರ ಮಂಗಳೂರಿನ ಕೆಪಿಟಿ ಬಳಿ ಸಂಭವಿಸಿದ…