tamanvi
ಅಪಘಾತ

ಮಂಗಳೂರಿನಲ್ಲಿ ಸ್ಕೂಟರ್ ಢಿಕ್ಕಿ: ಜಮ್ಮುವಿನಲ್ಲಿ ಸೇವೆ ಸಲ್ಲಿಸುತ್ತಿದ್ದ ಯೋಧ ಕೊಯಿಲ ಸೀತಾರಾಮ ಗೌಡ ಮೃತ್ಯು!!

D_shiva_bhat

ಈ ಸುದ್ದಿಯನ್ನು ಶೇರ್ ಮಾಡಿ

ಜಮ್ಮುವಿನಲ್ಲಿ ಸೇವೆ ಸಲ್ಲಿಸುತ್ತಿದ್ದ ಯೋಧನೋರ್ವರು ಬುಧವಾರ ಮಂಗಳೂರಿನ ಕೆಪಿಟಿ ಬಳಿ ಸಂಭವಿಸಿದ ಅಪಘಾತದಲ್ಲಿ ಮೃತಪಟ್ಟ ಬಗ್ಗೆ ವರದಿಯಾಗಿದೆ.

maithri

ಉಪ್ಪಿನಂಗಡಿ ನಿವಾಸಿ ಸೀತಾರಾಮ ಗೌಡ (47) ಮೃತಪಟ್ಟವರು. ಸೀತಾರಾಮ ಗೌಡ ಅವರು ಸಿಎಸ್ ಎಫ್ ಜಮ್ಮು ಸೆಂಟ್ರಲ್ ಜೈಲಿನಲ್ಲಿ ಹೆಡ್ ಕಾನ್‌ಸ್ಟೆಬಲ್ ಆಗಿ ಸೇವೆ ಸಲ್ಲಿಸುತ್ತಿದ್ದರು.

ಅವರು ಸಂಜೆ ಸ್ಕೂಟರ್‌ನಲ್ಲಿ ಕೆಪಿಟಿ ಕಡೆಯಿಂದ ಕೊಟ್ಟಾರಚೌಕಿ ಕಡೆಗೆ ಹೋಗುತ್ತಿದ್ದಾಗ ಸ್ಕೂಟರ್ ಡಿವೈಡರ್‌ಗೆ ಢಿಕ್ಕಿಯಾಗಿ ಬಳಿಕ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಪರಿಣಾಮವಾಗಿ ಅವರು ಗಂಭೀರ ಗಾಯಗೊಂಡು ಮೃತಪಟ್ಟರು ಎನ್ನಲಾಗಿದೆ.

ಬೇರೆ ವಾಹನ ಢಿಕ್ಕಿಯಾಗಿ ಅಪಘಾತ ಸಂಭವಿಸಿದೆಯೇ ಅಥವಾ ಸ್ಕೂಟರ್ ಸವಾರ ನಿಯಂತ್ರಣ ಕಳೆದುಕೊಂಡು ಡಿವೈಡರ್ ಗೆ ಢಿಕ್ಕಿಯಾಗಿದೆಯೇ ಎಂಬ ಬಗ್ಗೆ ತನಿಖೆ ನಡೆಯುತ್ತಿದೆ. ಕದ್ರಿ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts