tamanvi
ಅಪಘಾತ

ಬರಿಮಾರ್: ಶಾಲಾ ಬಸ್ ಮೇಲೆ ಬಿದ್ದ ಮರ; ಬಾಲಕಿ ಮೃತ್ಯು, ಹಲವರಿಗೆ ಗಾಯ!!

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಚಲಿಸುತ್ತಿದ್ದ ಶಾಲಾ ಬಸ್ ಮೇಲೆ ಭಾರೀ ಗಾತ್ರದ ಮರವೊಂದು ಉರುಳಿ ಬಿದ್ದು, ಓರ್ವ ವಿದ್ಯಾರ್ಥಿನಿ ಮೃತಪಟ್ಟ ದಾರುಣ ಘಟನೆ ಮಾಣಿ ಸಮೀಪದ ಬರಿಮಾರ್ ಎಂಬಲ್ಲಿ ನಡೆದಿದೆ.

ಬುಧವಾರ ಸಂಜೆ ಶಾಲೆ ಬಿಟ್ಟು ವಿದ್ಯಾರ್ಥಿಗಳನ್ನು ಕರೆದೊಯ್ಯುತ್ತಿದ್ದಾಗ ಘಟನೆ ನಡೆದಿದೆ. ಬಸ್ಸಿನಲ್ಲಿ 20 ಮಕ್ಕಳಿದ್ದು, ಘಟನೆಯಲ್ಲಿ ಓರ್ವ ವಿದ್ಯಾರ್ಥಿನಿ ಮೃತಪಟ್ಟಿದ್ದು, ಇನ್ನಿಬ್ಬರು ಗಾಯಗೊಂಡಿದ್ದಾರೆ.

ಗಾಯಾಳು ಮಕ್ಕಳನ್ನು ಸ್ಥಳೀಯರ ನೆರವಿನಿಂದ ತಕ್ಷಣವೇ ಪುತ್ತೂರು ಹಾಗೂ ತುಂಬೆ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಗ್ರಾಮಾಂತರ ಪೊಲೀಸ್ ಠಾಣೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಘಟನೆಯ ಕುರಿತು ಮಾಹಿತಿ ಸಂಗ್ರಹಿಸುತ್ತಿದ್ದಾರೆ. ಸದ್ಯ ಮೃತದೇಹವನ್ನು ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿರಿಸಲಾಗಿದೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts