tamanvi
ಅಪಘಾತ

ಕೆಯ್ಯೂರಿನಲ್ಲಿ ಬೈಕ್ – ಬಸ್ ಡಿಕ್ಕಿ: ಬಂಬಿಲ ನಿವಾಸಿ ಮೃತ್ಯು!!

D_shiva_bhat

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಕೆಯ್ಯೂರಿನ ಬೊಳಿಕ್ಕಳ ನೆಲ್ಲಿಗುರಿಯಲ್ಲಿ ಸಂಭವಿಸಿದ ಅಪಘಾತದಲ್ಲಿ ಯುವಕನೋರ್ವ ಮೃತಪಟ್ಟ ಘಟನೆ ಶನಿವಾರ ಬೆಳಿಗ್ಗೆ ನಡೆದಿದೆ.

ಮೃತರನ್ನು ಕುಮಾರಮಂಗಿಲ ಬಳಿಯ ಬಂಬಿಲ ನಿವಾಸಿ ಅಭಿಲಾಷ್ (24) ಎಂದು ಗುರುತಿಸಲಾಗಿದೆ. ಕೆಎಸ್‌ಆರ್‌ಟಿಸಿ ಬಸ್ ಹಾಗೂ ಬೈಕ್ ಅಪಘಾತ ಸಂಭವಿಸಿದೆ.

ಮಾಡಾವು ಕಟ್ಟೆಯಿಂದ ಸವಣೂರು ಕಡೆಗೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ಹಾಗೂ ಸವಣೂರಿನಿಂದ ಪುತ್ತೂರು ಕಡೆಗೆ ತೆರಳುತ್ತಿದ್ದ ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಅಪಘಾತದ ತೀವ್ರತೆಗೆ ಬೈಕ್ ಸವಾರ ಅಭಿಲಾಷ್ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಪುತ್ತೂರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ತನಿಖೆ ಮುಂದುವರಿಸಿದ್ದಾರೆ.

ಮೃತರು ತಂದೆ, ತಾಯಿ, ಸಹೋದರನನ್ನು ಅಗಲಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಮಂಗಳೂರಿನಲ್ಲಿ ಸ್ಕೂಟರ್ ಢಿಕ್ಕಿ: ಜಮ್ಮುವಿನಲ್ಲಿ ಸೇವೆ ಸಲ್ಲಿಸುತ್ತಿದ್ದ ಯೋಧ ಕೊಯಿಲ ಸೀತಾರಾಮ ಗೌಡ ಮೃತ್ಯು!!

ಜಮ್ಮುವಿನಲ್ಲಿ ಸೇವೆ ಸಲ್ಲಿಸುತ್ತಿದ್ದ ಯೋಧನೋರ್ವರು ಬುಧವಾರ ಮಂಗಳೂರಿನ ಕೆಪಿಟಿ ಬಳಿ ಸಂಭವಿಸಿದ…