tamanvi
ಅಪಘಾತ

ಕಾರು-ಸ್ಕೂಟರ್ ಡಿಕ್ಕಿ: 32ರ ಹರೆಯದ ಯುವಕ ದಾರುಣ ಅಂತ್ಯ

D_shiva_bhat

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ದ್ವಿಚಕ್ರ ವಾಹನ ಹಾಗೂ ಕಾರು ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಸ್ಕೂಟರ್ ಸವಾರ ಯುವಕ ಮೃತಪಟ್ಟ ಘಟನೆ ಮಿತ್ತೂರು ಸಮೀಪದ ಪರ್ಲೋಟ್ಟು ಎಂಬಲ್ಲಿ ಆ.25ರಂದು ನಡೆದಿದೆ.

ಮುರ ಶಾಂತಿನಗರ ನಿವಾಸಿ ಹರ್ಷದ್ (32) ಮೃತಪಟ್ಟವರು.

ಕಬಕದಿಂದ ಮಾಣಿ ಕಡೆಗೆ ಹರ್ಷದ್ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ವೇಳೆ, ಮಾಣಿಯಿಂದ ಕಬಕ ಕಡೆಗೆ ಬರುತ್ತಿದ್ದ ಕಾರು ಢಿಕ್ಕಿ ಹೊಡೆದಿದೆ. ಅಪಘಾತದ ಪರಿಣಾಮ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡ ಹರ್ಷದ್ ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಅಪಘಾತದ ತೀವ್ರತೆಗೆ ದ್ವಿಚಕ್ರ ವಾಹನ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಕಾರು ಕೂಡ ಜಖಂಗೊಂಡಿದೆ.

ಮೃತರು ತಾಯಿ, ಪತ್ನಿ, ಇಬ್ಬರು ಪುಟ್ಟ ಮಕ್ಕಳು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

ಘಟನಾ ಸ್ಥಳಕ್ಕೆ ವಿಟ್ಲ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts