tamanvi
ಅಪಘಾತ

ಮಾಣಿ ಫ್ಲೈಓವರ್ ಬಳಿ ಭೀಕರ ಅಪಘಾತ: ಮಹಿಳೆ ಮೃತ್ಯು, ಮೂವರು ಗಂಭೀರ

D_shiva_bhat

ಈ ಸುದ್ದಿಯನ್ನು ಶೇರ್ ಮಾಡಿ

ಮಾಣಿ: ಮಾಣಿಯ ಹಳೀರ ಬಳಿ ಫ್ಲೈಓವರ್ ಆರಂಭವಾಗುವ ರಸ್ತೆಯಲ್ಲಿ ಸೋಮವಾರ ಬೆಳಗ್ಗೆ ಆಲ್ಟೋ ಕಾರು ಹಾಗೂ ಟೆಂಪೋ ಪಿಕಪ್ ವಾಹನದ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮಡಿಕೇರಿ ಮೂಲದ ಮಹಿಳೆಯೊಬ್ಬರು ಮೃತಪಟ್ಟಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಉಮ್ರಾ ತರಗತಿ ಮುಗಿಸಿ ಕುಟುಂಬದ ಸದಸ್ಯರು ಮನೆಗೆ ಹಿಂದಿರುಗುತ್ತಿದ್ದ ವೇಳೆ ಬೆಳಗ್ಗೆ ಸುಮಾರು 6 ಗಂಟೆಗೆ ಈ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ಅಪಘಾತದ ರಭಸಕ್ಕೆ ಕಾರಿನಲ್ಲಿದ್ದವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಗಾಯಾಳುಗಳನ್ನು ತಕ್ಷಣ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಗಂಭೀರ ಸ್ಥಿತಿಯಲ್ಲಿ ಚಿಕಿತ್ಸೆ ಮುಂದುವರಿದಿದೆ.

ಇನ್ನು ಅಪಘಾತ ಸಂಭವಿಸಿದ ಸ್ಥಳದಲ್ಲಿರುವ ಹಳೀರದ ಸರ್ವಿಸ್ ರಸ್ತೆ ಪುತ್ತೂರು–ಮಡಿಕೇರಿ–ಮೈಸೂರು ರಸ್ತೆಗೆ ಸಂಪರ್ಕ ಕಲ್ಪಿಸುವ ಸಂದರ್ಭ ವಾಹನ ಸವಾರರಿಗೆ ಗೊಂದಲ ಉಂಟಾಗುತ್ತಿದೆ ಎಂದು ಸ್ಥಳೀಯರು ಹಲವು ಬಾರಿ ಆರೋಪಿಸಿದ್ದಾರೆ.

ಹೊರಗಿನಿಂದ ಬರುವ ವಾಹನ ಸವಾರರಿಗೆ ಪ್ರವೇಶ ರಸ್ತೆಯ ಕುರಿತು ಸ್ಪಷ್ಟ ಮಾಹಿತಿ ಸಿಗದಿರುವುದು, ಕಿರಿದಾದ ರಸ್ತೆ ಸರಿಯಾಗಿ ಗೋಚರಿಸದಿರುವುದು ಹಾಗೂ ಸೂಕ್ತ ಸೂಚನಾ ಫಲಕಗಳ ಕೊರತೆಯಿಂದಾಗಿ ಈ ಭಾಗದಲ್ಲಿ ಅಪಘಾತಗಳ ಸಂಖ್ಯೆ ಹೆಚ್ಚುತ್ತಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.

ಘಟನೆಯ ಕುರಿತು ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts