ಅಪಘಾತ

ನೆಲ್ಯಾಡಿಯಲ್ಲಿ ಅಪಘಾತ: ಪುತ್ತೂರಿನ ಕಾಲೇಜು ವಿದ್ಯಾರ್ಥಿ ಮೃತ್ಯು!!

ಈ ಸುದ್ದಿಯನ್ನು ಶೇರ್ ಮಾಡಿ

ಉಪ್ಪಿನಂಗಡಿ: ನಿಂತಿದ್ದ ಗ್ಯಾಸ್ ಟ್ಯಾಂಕರ್ ಗೆ ಕಾರು ಢಿಕ್ಕಿಯಾಗಿ ಸಂಭವಿಸಿದ ಅಪಘಾತದಲ್ಲಿ ಬಾಲಕನೋರ್ವ ಮೃತಪಟ್ಟ ಘಟನೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ನೆಲ್ಯಾಡಿ ಸಮೀಪದ ಕರ್ಬಸಂಕ ಎಂಬಲ್ಲಿ ಗುರುವಾರ ನಸುಕಿನ ಜಾವ ನಡೆದಿದೆ.

ನೆಲ್ಯಾಡಿ ಪ್ಲೇವರ್ಸ್ ಹೋಟೆಲ್ ಮಾಲಕ ಜೋಜೋ ಟಿ.ಜಾರ್ಜ್ ಎಂಬವರ ಪುತ್ರ, ಪುತ್ತೂರಿನ ಕಾಲೇಜೊಂದರ ಪ್ರಥಮ ಪಿಯುಸಿ ವಿದ್ಯಾರ್ಥಿ ಅನ್ವಿನ್ ಜೋಜೋ ಜಾರ್ಜ್ (16) ಮೃತಪಟ್ಟ ಬಾಲಕ.

ಇಂದು ನಸುಕಿನ ಜಾವ ಸುಮಾರು ಒಂದು ಗಂಟೆಯ ವೇಳೆಗೆ ನೆಲ್ಯಾಡಿ ಕರ್ಬಸಂಕದ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿಲ್ಲಿಸಲಾಗಿದ್ದ ಗ್ಯಾಸ್ ಟ್ಯಾಂಕರ್ ಗೆ ಇವರಿದ್ದ ಕಾರು ಢಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಕಾರಿನಲ್ಲಿದ್ದ ಅನ್ವಿನ್ ಜೋಜೋ ಜಾರ್ಜ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಘಟನೆಯ ಮಾಹಿತಿ ತಿಳಿದ ತಕ್ಷಣ ನೆಲ್ಯಾಡಿ ಹೊರಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts