ಅಪಘಾತ

ಮಂಗಳೂರು: ಗ್ಯಾಸ್ ಸಿಲಿಂಡರ್ ಲಾರಿ ಪಲ್ಟಿ!!

ಈ ಸುದ್ದಿಯನ್ನು ಶೇರ್ ಮಾಡಿ

ಮಂಗಳೂರು ಸಮೀಪದ ಕಣ್ಣೂರು ಬಳಿ ರಾಷ್ಟ್ರೀಯ ಹೆದ್ದಾರಿ 73ರಲ್ಲಿ ಶುಕ್ರವಾರ ತಡರಾತ್ರಿ ಅನಿಲ ಸಿಲಿಂಡರ್‌ಗಳನ್ನು ಸಾಗಿಸುತ್ತಿದ್ದ ಲಾರಿಯೊಂದು ಪಲ್ಟಿಯಾಗಿದ್ದು, ಹೆದ್ದಾರಿಯಲ್ಲಿ ವಾಹನ ಸಂಚಾರ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ.

ಮಂಗಳೂರಿನಿಂದ ಬೆಂಗಳೂರು ಕಡೆಗೆ ತೆರಳುತ್ತಿದ್ದ ಲಾರಿ, ಕಣ್ಣೂರಿನ ಮಸೀದಿ ಸಮೀಪ ಚಾಲಕನ ನಿಯಂತ್ರಣ ತಪ್ಪಿ ರಸ್ತೆಗಡ್ಡಲಾಗಿ ಪಲ್ಟಿಯಾಗಿದೆ. ಪರಿಣಾಮವಾಗಿ ಹೆದ್ದಾರಿಯಲ್ಲಿ ಕಿಲೋಮೀಟರ್‌ಗಟ್ಟಲೆ ವಾಹನಗಳು ಸಾಲುಗಟ್ಟಿ ನಿಂತು ಸಂಚಾರ ದಟ್ಟಣೆ ಉಂಟಾಯಿತು.

ಘಟನಾ ಸ್ಥಳಕ್ಕೆ ಅಗ್ನಿಶಾಮಕ ಮತ್ತು ತುರ್ತು ಸೇವಾ ಸಿಬ್ಬಂದಿ ಧಾವಿಸಿ, ಯಾವುದೇ ಅನಾಹುತ ಸಂಭವಿಸದಂತೆ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದ್ದಾರೆ.

ಸಂಚಾರ ದಟ್ಟಣೆಯನ್ನು ಸುಧಾರಿಸಲು ಮಂಗಳೂರು ಸಂಚಾರ ಪೊಲೀಸರು ಪರ್ಯಾಯ ಮಾರ್ಗಗಳ ಮೂಲಕ ವಾಹನಗಳನ್ನು ಸಂಚರಿಸಲು ಸೂಕ್ತ ವ್ಯವಸ್ಥೆ ಕೈಗೊಂಡರು.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಕೊಟ್ಟಿಯೂರು: ಭಾರೀ ಜನಸಂದಣಿ, 10 ನಿಮಿಷದ ಹಾದಿಗೆ 3.30 ತಾಸು!! ಮಗು ಸಾವು; ಹೊಳೆ ನೀರಲ್ಲಿ ಕೊಚ್ಚಿ ಹೋದ ತರುಣರು!!

ಕಣ್ಣೂರು: ಕೊಟ್ಟಿಯೂರಿನಲ್ಲಿ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ್ದರಿಂದ ಸಂಚಾರ ದಟ್ಟಣೆ…