ಅಪಘಾತ

ಬೈಪಾಸ್ ರಸ್ತೆಯಲ್ಲಿ‌ ನಿಲ್ಲಿಸಿದ್ದ ಲಾರಿಗೆ ಡಿಕ್ಕಿ‌ ಹೊಡೆದ ಕಾರು: ಓರ್ವ ಮೃತ್ಯು!!

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ರಸ್ತೆ ಬದಿ ನಿಲ್ಲಿಸಿದ್ದ ಟಿಪ್ಪರ್ ಲಾರಿಗೆ ಕಾರು ಡಿಕ್ಕಿ ಹೊಡೆದು, ಓರ್ವ ಮೃತಪಟ್ಟ ಘಟನೆ ಪುತ್ತೂರು ಬೈಪಾಸ್ ರಸ್ತೆಯಲ್ಲಿ ಗುರುವಾರ ನಸುಕಿನ ಜಾವ ನಡೆದಿದೆ.

ದರ್ಬೆ ಸಮೀಪ ಘಟನೆ ನಡೆದಿದ್ದು, ಮೃತರನ್ನು ತಮಿಳುನಾಡು ಮೂಲದ ಅರ್ಮುಗಂ (85) ಎಂದು ಗುರುತಿಸಲಾಗಿದೆ. ಇನ್ನೋರ್ವರು ಗಂಭೀರ ಗಾಯಗೊಂಡ ಬಗ್ಗೆ ವರದಿಯಾಗಿದೆ.

ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ ರಾಜನ್ ಎಂಬವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಕಾರು ಚಾಲಕ ಮಣಿಕಂಠ ಅವರು ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದುಬಂದಿದೆ.

ಮಡಿಕೇರಿಯಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ KA-12-MB-1407 ಬರಿನ ಎರ್ಟಿಗಾ ಕಾರು, ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿ ನಿಲ್ಲಿಸಲಾಗಿದ್ದ ಟಿಪ್ಪರ್‌ಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಚಾಲಕನ ನಿದ್ರೆ ಮಂಪರು ಅಪಘಾತಕ್ಕೆ ಕಾರಣವಾಗಿರಬಹುದೆಂದು ಶಂಕಿಸಲಾಗಿದೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts