ಅಪಘಾತ

ಕಾರು-ಬೈಕ್ ಅಪಘಾತ: ಪುತ್ತೂರಿಗೆ ಕರೆತರುವ ದಾರಿಯಲ್ಲಿ ಕೊನೆಯುಸಿರೆಳೆದ ಬೈಕ್ ಸವಾರ!!

ಈ ಸುದ್ದಿಯನ್ನು ಶೇರ್ ಮಾಡಿ

ಕಡಬದ ಬಿಳಿ ನೆಲೆಯ ಕೋಟೆ ಹೊಳೆ ಸೇತುವೆ ಬಳಿ ಕಾರು ಮತ್ತು ಸ್ಕೂಟರ್ ನಡುವೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಸ್ಕೂಟರ್ ಸವಾರ ಮೃತಪಟ್ಟ ಘಟನೆ ನ.27ರಂದು ಸಂಭವಿಸಿದೆ.

ಸೋಮವಾರಪೇಟೆ ಪಟ್ಟಣದ ಸಮೀಪದ ಕಲ್ಕಂದೂರು ನಿವಾಸಿ ಕೃಷ್ಣಪ್ಪ ಅವರ ಪುತ್ರ ವಿಶ್ವಾಸ್ (31) ಮೃತಪಟ್ಟ ಯುವಕ. ಅವರು ಮಂಗಳೂರಿನ ಖಾಸಗಿ ಕಂಪೆನಿಯೊಂದರಲ್ಲಿ ಉದ್ಯೋಗದಲ್ಲಿದ್ದರು ಎಂದು ತಿಳಿದುಬಂದಿದೆ.

ಸುಬ್ರಹ್ಮಣ್ಯ ಕಡೆಯಿಂದ ತೆರಳುತ್ತಿದ್ದ ಸೋಮವಾರಪೇಟೆಯ ಬೈಕ್ ಸವಾರ ಮತ್ತು ಧರ್ಮಸ್ಥಳದಿಂದ ಸುಬ್ರಹ್ಮಣ್ಯಕ್ಕೆ ಬರುತ್ತಿದ್ದ ಕಾರು ಮುಖಾಮುಖಿ ಡಿಕ್ಕಿ ಹೊಡೆದು ಬೈಕ್ ಸವಾರ ತೀವ್ರವಾಗಿ ಗಾಯಗೊಂಡರು.

ಗಾಯಾಳುವನ್ನು ಆಸ್ಪತ್ರೆಗೆ ಸಾಗಿಸುವ ವೇಳೆ ಮೃತ ಪಟ್ಟಿರುವುದಾಗಿ ತಿಳಿದು ಬಂದಿದೆ. ಸುಬ್ರಹ್ಮಣ್ಯದಲ್ಲಿ ತುರ್ತು ಚಿಕಿತ್ಸೆಗೆ ವ್ಯವಸ್ಥೆ ಇಲ್ಲದ ಕಾರಣ ಗಾಯಾಳುವನ್ನು ಪುತ್ತೂರಿಗೆ ಕರೆದೊಯ್ಯುವ ವೇಳೆ ದಾರಿ ಮಧ್ಯೆ ಕೊನೆಯುಸಿರೆಳೆದರೆಂದು ತಿಳಿದು ಬಂದಿದೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts