ಬೆಂಗಳೂರು: ಶಿಕ್ಷಣ ಕ್ಷೇತ್ರದಲ್ಲಿ ಜಾಗತಿಕ ಮಟ್ಟದಲ್ಲಿ ಹೆಸರು ಮಾಡಿರುವ ಪಿಇಎಸ್ ಶಿಕ್ಷಣ ಸಂಸ್ಥೆಯ (PES University) ಸಂಸ್ಥಾಪಕ ಹಾಗೂ ಪಿಇಎಸ್ ವಿಶ್ವವಿದ್ಯಾಲಯದ ಕುಲಪತಿ ಡಾ.ಎಂ.ಆರ್. ದೊರೆಸ್ವಾಮಿ (M.R Doreswamy) ಗುರುವಾರ ಸಂಜೆ ನಿಧನರಾಗಿದ್ದಾರೆ.
ಐದು ದಶಕಗಳ ಹಿಂದೆ ಬೆಂಗಳೂರಿನ ಗವಿಪುರ ಗುಟ್ಟಹಳ್ಳಿಯಲ್ಲಿ ತಾತ್ಕಾಲಿಕ ಕಟ್ಟಡವೊಂದರಲ್ಲಿ ಕೇವಲ 45 ವಿದ್ಯಾರ್ಥಿಗಳೊಂದಿಗೆ ಪಿಯು ಕಾಲೇಜು ಆರಂಭಿಸಿದ ದೂರದೃಷ್ಟಿಯ ದೊರೆಸ್ವಾಮಿಯವರು ಪೀಪಲ್ಸ್ ಎಜುಕೇಷನ್ ಸೊಸೈಟಿ (ಪಿಇಎಸ್) ಎಂಬ ಬ್ರಾಂಡ್ ಕಟ್ಟಿ, ಇಂಜಿನಿಯರಿಂಗ್, ಮೆಡಿಕಲ್, ಹೊಸ ವಿಶ್ವವಿದ್ಯಾಲಯ ಸೇರಿದಂತೆ ಉನ್ನತ ಶಿಕ್ಷಣ ಕ್ಷೇತ್ರದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದಾರೆ.