ನಿಧನ

ಕೌಟುಂಬಿಕ ಕಲಹ: ಕೆರೆಗೆ ಹಾರಿ ತಾಯಿ-ಮಗ ಆತ್ಮಹತ್ಯೆ!!

GL
ಕೌಟುಂಬಿಕ ಕಲಹದಿಂದ ನೊಂದು ಕೆರೆಗೆ ಹಾರಿ ತಾಯಿ-ಮಗ ಆತ್ಮಹತ್ಯೆ ಮಾಡಿಕೊಂಡಿರುವ ಹೃದಯ ವಿದ್ರಾವಕ ಘಟನೆ ಚನ್ನರಾಯಪಟ್ಟಣ ತಾಲೂಕಿನ ಕಬ್ಬಳಿ ಗ್ರಾಮದಲ್ಲಿ ನಡೆದಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಹಾಸನ:ಕೌಟುಂಬಿಕ ಕಲಹದಿಂದ ನೊಂದು ಕೆರೆಗೆ ಹಾರಿ ತಾಯಿ-ಮಗ ಆತ್ಮಹತ್ಯೆ ಮಾಡಿಕೊಂಡಿರುವ ಹೃದಯ ವಿದ್ರಾವಕ ಘಟನೆ ಚನ್ನರಾಯಪಟ್ಟಣ ತಾಲೂಕಿನ ಕಬ್ಬಳಿ ಗ್ರಾಮದಲ್ಲಿ ನಡೆದಿದೆ.

chennai-shopping
maithri

ಕಬ್ಬಳಿ ಗ್ರಾಮದ ಜಯಂತಿ (೬೦) ಹಾಗೂ ಅವರ ಪುತ್ರ ಭರತ್ (೩೫) ಆತ್ಮಹತ್ಯೆಗೆ ಶರಣಾದವರು,ಭರತ್ ಕಳೆದ ಎಂಟು ತಿಂಗಳ ಹಿಂದಷ್ಟೇ ಅರಸೀಕೆರೆ ತಾಲೂಕು ಬಾಗೂರನಹಳ್ಳಿ ಗ್ರಾಮದ ಯುವತಿಯೊಂದಿಗೆ ವಿವಾಹವಾಗಿದ್ದರು. ಅತ್ತೆ-ಸೊಸೆ ನಡುವೆ ಹೊಂದಾಣಿಕೆ ಇಲ್ಲದೆ ಪದೇಪದೇ ಜಗಳ ನಡೆಯುತ್ತಿತ್ತು. ಇದೇ ಕಾರಣಕ್ಕೆ ಭರತ್‌ ಪತ್ನಿ ಮನೆಬಿಟ್ಟು ತವರು ಮನೆಗೆ ಹೋಗಿದ್ದರು.

ಕುಟುಂಬಸ್ಥರು ಹಾಗೂ ಗ್ರಾಮಸ್ಥರು ಎರಡು ಬಾರಿ ರಾಜಿ

ಪಂಚಾಯ್ತಿ ಮಾಡಿದ್ದರು. ಆದರೂ ಪತ್ನಿ ಪತಿ ಜೊತೆ ಇರದೇ ತವರು ಮನೆಗೆ ಹೋಗಿದ್ದರು. ಇದರಿಂದ ಮನನೊಂದಿದ್ದ ಭರತ್‌ ಹಾಗೂ ತಾಯಿ ಜಯಂತಿ ಕೆರೆಗೆ ಜಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts